ಹಳೆ ಹುಬ್ಬಳ್ಳಿಯ (Road widening) ನ್ಯೂ ಇಂಗ್ಲಿಷ್ ಸ್ಕೂಲ್​ನಿಂದ ಇಂಡಿ ಪಂಪ್​ವರೆಗೆ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಅಧಿಕಾರಿಗಳೊಂದಿಗೆ ಸೋಮವಾರ ಪರೀಶೀಲನೆ ನಡೆಸಿದರು. 
ಧಾರವಾಡ

ಭೂಸ್ವಾಧೀನಕ್ಕೆ (Road widening) 9.5 ಕೋ.ರೂ. ವಿಶೇಷ ಅನುದಾನ

ಹುಬ್ಬಳ್ಳಿ: ನಗರದ ನ್ಯೂ ಇಂಗ್ಲಿಷ್ (Road widening) ಸ್ಕೂಲ್​ನಿಂದ ಇಂಡಿ ಪಂಪ್​ವರೆಗಿನ ರಸ್ತೆ ಅಗಲೀಕರಣ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದರು.
ಹುಬ್ಬಳ್ಳಿಯ ರ್ಸಟ್ ಹೌಸ್​ನಲ್ಲಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಹಳೇ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್​ನಿಂದ ಇಂಡಿಪಂಪ್ ವರೆಗಿನ ರಸ್ತೆ ಸಾಕಷ್ಟು ಜನದಟ್ಟಣೆಯಿಂದ ಕೂಡಿದ್ದು, ಸುಗಮ ಸಂಚಾರಕ್ಕಾಗಿ ರಸ್ತೆ ಅಗಲೀಕರಣದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೇ ಅಕ್ಕಪಕ್ಕದ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ ಯಾವುದೇ ಅಡೆತಡೆಗಳು ಬಂದರೂ ಅದನ್ನು ಪರಿಹರಿಸಿ ಶೀಘ್ರವೇ ಈ ಭಾಗದ ಜನರಿಗೆ ಸಂಚರಿಸಲು ಅನುಕೂಲ ಮಾಡಿಕೊಡಬೇಕು ಎಂದರು.
ಇಂಡಿ ಪಂಪ್ ವೃತ್ತದಿಂದ ಪಿಬಿ ರಸ್ತೆಯ ನ್ಯೂ ಇಂಗ್ಲೀಷ್ ಸ್ಕೂಲ್​ವರೆಗಿನ 1.24 ಕಿ.ಮೀ. ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದೆ. ರಸ್ತೆ ಅಗಲೀಕರಣ ಸಮೀಕ್ಷಾ ವರದಿಯಲ್ಲಿ ತಿಳಿಸಿರುವಂತೆ 243 ಖಾಸಗಿ ಸ್ವತ್ತುಗಳು ಸೇರಿದಂತೆ ಭೂಸ್ವಾಧೀನಕ್ಕೆ ಅವಶ್ಯವಿರುವ ರೂ. 9.5 ಕೋಟಿಗೂ ಹೆಚ್ಚು ಅನುದಾನವನ್ನು ವಿಶೇಷ ಅನುದಾನದಿಂದ ಭರಿಸಲಾಗುವುದು. ಶೀಘ್ರವೇ ರಸ್ತೆ ಅಗಲೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಆರ್. ಸ್ನೇಹಲ್, ಎಡಿಸಿ ಸಿ.ಡಿ.ಗೀತಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಡಿಸಿಪಿಗಳಾದ ಸಿ.ಆರ್. ರವೀಶ, ಎನ್.ಎಸ್.ಶೃತಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ಎಇಇ ವಿಜಯಕುಮಾರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.