satyanarayana puje ಹುಬ್ಬಳ್ಳಿ ತಾಲೂಕಿನ ಆನಂದನಗರದ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಶ್ರೀರಾಜರಾಜೇಶ್ವರ ಚೈತನ್ಯ ಸ್ವಾಮೀಜಿ ಉದ್ಘಾಟಿಸಿದರು.
ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ
ತಾಲೂಕಿನ ಆನಂದನಗರದ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಶ್ರೀರಾಜರಾಜೇಶ್ವರ ಚೈತನ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ. ಲಕ್ಷಾಂತರ ಕುಟುಂಬಗಳಿಗೆ ದಾರಿದೀಪವಾಗಿದ್ದಾರೆ ಎಂದು ಬಣ್ಣಿಸಿದರು.
ಹಳೇ ಹುಬ್ಬಳ್ಳಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಸಿಂಧೂರ ಉದ್ಘಾಟಿಸಿ ಮಾತನಾಡಿ, ಕಟ್ಟೆ ಮೇಲೆ ಕುಳಿತು ಬೇಡವಾದ ಮಾತುಗಳನ್ನಾಡುವುದಕ್ಕಿಂತ ಒಬ್ಬ ಶಿಕ್ಷಕರು, ಉತ್ತಮ ಜ್ಞಾನವುಳ್ಳವರ ಜತೆ ಮಾತನಾಡಿದರೆ ಒಳ್ಳೆಯ ಜ್ಞಾನ ಬೆಳೆಸಿಕೊಳ್ಳಬಹುದು ಎಂದರು.
ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಇಮ್ರಾನ್ ಯಲಿಗಾರ, ಶ್ರೀ ಸದ್ಗುರು ಶಿರಡಿ ಸಾಯಿಬಾಬಾ ಸೇವಾ ಸಮಿತಿ ಅಧ್ಯಕ್ಷ ಈಶ್ವರಯ್ಯ ಹಿರೇಮಠ ಮಾತನಾಡಿದರು.
ಸಂಸ್ಥೆಯ ಹುಬ್ಬಳ್ಳಿ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಲೀಲಾಮೂರ್ತಿ ಚೌಟೇರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಯೋಜನಾಧಿಕಾರಿ ಪ್ರದೀಪ ಶೆಟ್ಟಿ, ಮೇಲ್ವಿಚಾರಕರಾದ ಗೌರಮ್ಮ ಹಿರೇಮಠ, ಮಂಜುಳಾ ಚಂದ್ರಶೇಖರ ಇತರರಿದ್ದರು.