ಧಾರವಾಡದ ವಾಲ್ಮಿಯಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಭೂ ದಿನಾಚರಣೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎ್.ಎಚ್. ಜಕ್ಕಪ್ಪನವರ ಉದ್ಘಾಟಿಸಿದರು. ಡಾ. ವಿ.ಬಿ. ಕುಲಗೋಡ, ಡಾ. ಗಿರೀಶ ಮರಡ್ಡಿ, ಬೈಲಪ್ಪ, ಬಿ.ವೈ. ಬಂಡಿವಡ್ಡರ, ಇತರರಿದ್ದರು. 
ಧಾರವಾಡ

save water ನೀರಿನ ಉಳಿತಾಯ, ಸದ್ಬಳಕೆ ಪ್ರತಿಯೊಬ್ಬರ ಜವಾಬ್ದಾರಿ

ದೀಪಕ ತಲವಾಯಿ
ಧಾರವಾಡ: ನೀರಿನ ಉಳಿತಾಯ (save water) ಮತ್ತು ಸದ್ಬಳಕೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿಯಮಾವಳಿ ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎ್.ಎಚ್. ಜಕ್ಕಪ್ಪನವರ ಹೇಳಿದರು.
ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ (ವಾಲ್ಮಿ) ಬುಧವಾರ ಆಯೋಜಿಸಿದ್ದ ವಿಶ್ವ ಭೂ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು ಮತ್ತು ನೀರಿನ ಸಂರಕ್ಷಣೆ, ಸದ್ಬಳಕೆ ಹಾಗೂ ಅಭಿವೃದ್ಧಿಗೆ ಪೂರಕವಾಗುವ ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದರು.
ಕೃಷಿ ವಿಶ್ವವಿದ್ಯಾಲಯದ ನಿವೃತ್ತ ವಿದ್ಯಾಧಿಕಾರಿ ಹಾಗೂ ಮಣ್ಣು ವಿಜ್ಞಾನಿ ಡಾ. ವಿ.ಬಿ. ಕುಲಗೋಡ ಮಾತನಾಡಿ, ಅವೈಜ್ಞಾನಿಕ ಕೃಷಿ ಪದ್ಧತಿಯಿಂದ ಮಣ್ಣಿನ ಗುಣಮಟ್ಟ ನಶಿಸುತ್ತಿದೆ. ಮಣ್ಣಿನಲ್ಲಿರುವ ಪೋಷಕಾಂಶಗಳು ಕೃಷಿಗೆ ಸಮತೋಲನವಾಗಿರಬೇಕು. ಮಣ್ಣು ಪರೀಕ್ಷೆ ಮತ್ತು ನೀರು ಪರೀಕ್ಷೆ ಮೂಲಕ ಮಣ್ಣಿನ ಗುಣಧರ್ಮವನ್ನು ಆಧರಿಸಿ ಶಿಾರಸು ಮಾಡಿದ ಪೋಷಕಾಂಶಗಳು ಹಾಗೂ ರಾಸಾಯನಿಕಗಳನ್ನು ಮಾತ್ರ ಪೂರೈಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಾಲ್ಮಿ ನಿರ್ದೇಶಕ ಡಾ. ಗಿರೀಶ ಮರಡ್ಡಿ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಇಂಥಹ ಸಂದರ್ಭದಲ್ಲೂ ಆಹಾರ ಭದ್ರತೆ ನೀಡುವುದು ಅನಿವಾರ್ಯ. ಸಮೃದ್ಧ ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು ಮತ್ತು ನೀರಿನ ವೈಜ್ಞಾನಿಕ ನಿರ್ವಹಣೆಯಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಬಹುದಾಗಿದೆ ಎಂದರು.
ಹುಬ್ಬಳ್ಳಿಯ ಪ್ರಗತಿಪರ ರೈತ ಗುರುಸಿದ್ದಪ್ಪ, ಚಾಲಕ ಬಸವರಾಜ ಮಾಟೊಳ್ಳ್ಳಿ, ಪ್ರಗತಿಪರ ರೈತ ಹಾಗೂ ಉದ್ಯಮಿ ವಿಷ್ಣು ಅವರನ್ನು ಸನ್ಮಾನಿಸಲಾಯಿತು. ನಿರ್ಮಿತಿ ಕೇಂದ್ರದ ಇಂಜಿನಿಯರ್ ಬೈಲಪ್ಪ ಮತ್ತು ಪ್ರಾಧ್ಯಾಪಕ ಬಿ.ವೈ. ಬಂಡಿವಡ್ಡರ ಅತಿಥಿಗಳಾಗಿ ಭಾಗವಹಿಸಿದ್ದರು. ಕಲ್ಯಾಣ ಕರ್ನಾಟಕ ಭಾಗದ ಜಲ ಸಂಪನ್ಮೂಲ ಇಲಾಖೆಯ ಇಂಜಿನಿಯರ್‌ಗಳು, ತುಂಗಭದ್ರಾ ಯೋಜನೆಯ ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಯ ರೈತರು ಮತ್ತು ವಾಲ್ಮಿ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು.
ಇಂದುಧರ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ ದೇವರಮನಿ ಸ್ವಾಗತಿಸಿದರು. ಅನುರಾಧಾ ಮಳಗಿ ನಿರೂಪಿಸಿದರು. ಸುನಂದಾ ಸಿತೋಳೆ ವಂದಿಸಿದರು.