school parliament ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಎಂಎಲ್ಸಿ ಲಿಂಗರಾಜ ಪಾಟೀಲ, ಎಸ್.ಎಸ್. ಮುಲ್ಕಿಪಾಟೀಲ, ದಿನೇಶ ಶೆಣೈ, ಮುರಳಿಧರ ಕರ್ಜಗಿ, ಡಿ.ಜೆ. ಜಾಧವ, ಭಾರತಿ ದೊಡ್ಡಮನಿ ಇತರರು ಪಾಲ್ಗೊಂಡಿದ್ದರು.
- ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಅಭಿಮತ
- ಲ್ಯಾಮಿಂಗ್ಟನ್ ಶಾಲಾ ಸಂಸತ್ತು ರಚನೆ
ಹುಬ್ಬಳ್ಳಿ: school parliament ಇಲ್ಲಿಯ ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯ ಶಾಲಾ ಸಂಸತ್ತು ಹಾಗೂ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಸಂಭ್ರಮದಿಂದ ನಡೆಯಿತು.
ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್ ನೂತನ ಸದಸ್ಯ ಲಿಂಗರಾಜ ಪಾಟೀಲ ಅವರು ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಲೆ ಹಂತದಲ್ಲಿಯೇ ನಮ್ಮ ಪ್ರಜಾಪ್ರಭುತ್ವದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವುದು ಮಹತ್ವದ ಕೆಲಸವಾಗಿದೆ. ಇದರಿಂದ ಮಂತ್ರಿಮಂಡಲದ ಮಹತ್ವ ತಿಳಿಯಲಿದೆ. ವಿದ್ಯಾರ್ಥಿಗಳು ಮುಂದೆ ಉತ್ತಮ ನಾಗರಿಕರಾಗಲು, ನಾಯಕತ್ವದ ಗುಣ ಬೆಳೆಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಇದಲ್ಲದೇ ಮಕ್ಕಳಿಗೆ ತಮ್ಮ ಹಕ್ಕು ಕರ್ತವ್ಯಗಳ ಬಗ್ಗೆಯೂ ಅರಿವು ಮೂಡಲಿದೆ. ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಎಸ್.ಎಸ್. ಮುಲ್ಕಿಪಾಟೀಲ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದರು.