birth ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಡ್ಡಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಫಕ್ಕೀರಪ್ಪ ತಟ್ಟಿಮನಿ. 
ಧಾರವಾಡ

ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜಯಂತಿ birth

ಪ್ರಮುಖ ಮುಖ್ಯಾಂಶಗಳು

  • 85 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ
  • ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು
  • ನಿವೃತ್ತಿ ಹೊಂದಿರುವ ಸರ್ಕಾರಿ ನೌಕರರನ್ನು ಸನ್ಮಾನಿಸಲಾಗುವುದು
ಹುಬ್ಬಳ್ಳಿ :
ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.
ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಜೂ. 26ರ ಸಂಜೆ 5 ಗಂಟೆಯೊಳಗೆ ಹೆಸರು ನೋಂದಾಯಿಸಬೇಕು. ಇದುವರೆಗೆ 85 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.
ಇದೇ ಅವಧಿಯಲ್ಲಿ ಸಮಾಜದ ನಿವೃತ್ತಿ ಹೊಂದಿರುವ ಧಾರವಾಡ ಜಿಲ್ಲೆಯ ಸರ್ಕಾರಿ ನೌಕರರನ್ನು ಸಹ ಸನ್ಮಾನಿಸಲಾಗುವುದು ಎಂದು ಹೇಳಿದರು.
ಹಾನಗಲ್ಲನ ಸುಕ್ಷೇತ್ರ ಕೂಡಲ ಗ್ರಾಮದ ಶ್ರೀ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದು, ಟ್ರಸ್ಟ್​ನ ಗೌರವ ಅಧ್ಯಕ್ಷ ನಿಂಗನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು ಎಂದು ತಿಳಿಸಿದರು.
ಮಾಜಿ ಸಚಿವ ಸಂತೋಷ ಲಾಡ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಜಿ.ಎಸ್. ಪಾಟೀಲ, ಎನ್.ಎಚ್. ಕೋನರಡ್ಡಿ, ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ಹಾಗೂ ಇತರರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಟ್ರಸ್ಟ್​ನ ಬಸವರಾಜ ಕಳಕರೆಡ್ಡಿ, ನಾಗರಾಜ ಗುಡಸಲಮನಿ, ಪ್ರಕಾಶ ಬಿದರಣ್ಣವರ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.