ಧಾರವಾಡ: ಜಿಲ್ಲೆಯಲ್ಲಿ ಕಳೆದ 5- 6 ತಿಂಗಳಿಂದ ಅಪರಾಧಗಳ ಸಂಖ್ಯೆ ಕಡಿಮೆ ಆಗಿದ್ದರೂ ಸಂರ್ಪೂಣ ನಿಯಂತ್ರಣವಾಗುತ್ತಿಲ್ಲ. ಡ್ರಗ್ಸ್, ಗಾಂಜಾ ಸೇವನೆ, ಮಾರಾಟ ಕಡಿಮೆ ಆಗಿದ್ದರೂ ನಿಲ್ಲುತ್ತಿಲ್ಲ. ಪೊಲೀಸ್ ಅಧಿಕಾರಿಗಳು ಪ್ರತಿ ಪ್ರಕರಣವನ್ನು ಪರಿಶೀಲಿಸಿ ನಿಜವಾದ ಅಪರಾಧಿಗಳ ಮೇಲೆ ಕ್ರಮ ಜರುಗಿಸಬೇಕು. ಅಪರಾಧ ಕೃತ್ಯದ ಮನೊಭಾವದವರಿಗೆ ಪೊಲೀಸ್ ಖದರ್ ತೋರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಹಾಗೂ ಮಹಾನಗರ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಂತಿ, ಸುವ್ಯಸ್ಥೆಗೆ ದಕ್ಕೆ ತರುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಯಾರ ಶಿಾರಸು, ಒತ್ತಡಗಳಿಗೆ ಒಳಗಾಗದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ ಕುಮ್ಮಕ್ಕು ನೀಡುವ ಮತ್ತು ಡ್ರಗ್ಸ್, ಗಾಂಜಾ, ಅಫೀಮು ಪ್ರಕರಣಗಳ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯನ್ನು ಡ್ರಗ್ಸ್, ಗಾಂಜಾ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಕಾಲೇಜು, ಸಾರ್ವಜನಿಕ ಸ್ಥಳ ಹಾಗೂ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಅಪರಾ ಡ್ರಗ್ಸ್, ಗಾಂಜಾ ಅಂತಹ ಅಫೀಮುಗಳ ಬಗ್ಗೆ ಜನಜಾಗತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ, ಕಾಲೇಜು ಶಿಕರನ್ನು, ಸಮಾಜದ ಗಣ್ಯ ವ್ಯಕ್ತಿಗಳನ್ನು, ಜನಾಭಿಪ್ರಾಯ ರೂಪಿಸುವವರನ್ನು ಅಪರಾಧಮುಕ್ತ ಜಿಲ್ಲೆ ಮಾಡುವ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಠಾಣೆಗಳ ಅಧಿಕಾರಿಗಳು ರಾತ್ರಿ ವೇಳೆ ಜಿಲ್ಲೆಯಲ್ಲಿ ಸಂಚರಿಸಿ, ಅನಿರೀತ ಭೇಟಿ ನೀಡಬೇಕು. ಶಾಂತಿ, ಕಾನೂನು ಸುವ್ಯವಸ್ಥೆ ಪರಿಶೀಲಿಸಿ ಪ್ರತಿ ತಿಂಗಳು ವರದಿ ಸಲ್ಲಿಸಬೇಕು ಎಂದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್. ಮತ್ತು ಶ್ರುತಿ ಎನ್.ಎಸ್., ಇತರರಿದ್ದರು.