Ex Chief Minister Jagadish Shettar
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ನವೆಂಬರ್ ಅಂತ್ಯದಲ್ಲಿ ರಾಜಕೀಯ ಬದಲಾವಣೆ ಖಚಿತ. ಇದೇ ರೀತಿ ಮುಂದುವರಿದರೆ ಸರ್ಕಾರ ಪತನಗೊಳ್ಳುವ ಸಾಧ್ಯತೆಯೂ ಇದೆ. ನವೆಂಬರ್ನಲ್ಲಿ ಕ್ರಾಂತಿ ಆಗುತ್ತದೆಯೋ ಅಥವಾ ಭ್ರಾಂತಿಯಾಗುತ್ತದೆಯೋ ಗೊತ್ತಿಲ್ಲ. ಆದರೆ, ಏನೋ ಒಂದು ಆಗುವುದಂತೂ ಖಚಿತ ಎಂದರು. ಕಬ್ಬು ಬೆಳೆಗಾರರ ಕಿಚ್ಚು ತಾತ್ಕಾಲಿಕವಾಗಿ ಶಮನಗೊಂಡಿದೆ. ಮತ್ತೆ ಯಾವಾಗ ಬೇಕಾದರೂ ಹೋರಾಟ ನಡೆಯಬಹುದು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಸಮಸ್ಯೆ ಉದ್ಭವಿಸಿದ್ದು. ನಾನು ಸಕ್ಕರೆ ಸಚಿವನಾಗಿದ್ದಾಗ ಹಾಗೂ ಮುಖ್ಯಮಂತ್ರಿಯಾಗಿದ್ದಾಗ ಮುಂಚಿತವಾಗಿಯೇ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕರೆಯಿಸಿ ಮಾತನಾಡಿದ್ದೆ. ಸಕ್ಕರೆ ಸಚಿವರಿಗೆ ಎಲ್ಲವೂ ಗೊತ್ತಿರುತ್ತದೆ. ಅವರು ಮುಖ್ಯಮಂತ್ರಿ ಗಮನಕ್ಕೆ ತಂದು, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಮುಂಚಿತವಾಗಿಯೇ ಮಾಡಬೇಕಿತ್ತು ಎಂದರು.
ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ ಇದುವರೆಗೆ ಲಿಖಿತ ಆದೇಶ ಬಂದಿಲ್ಲ. ಕಾರ್ಖಾನೆಗಳ ಮಾಲೀಕರು ರೈತರಿಗೆ ನಿಗದಿತ ಬೆಲೆ ನೀಡದಿದ್ದರೆ ಮುಖ್ಯಮಂತ್ರಿ ವಸೂಲಿ ಮಾಡಿ ಕೊಡುತ್ತಾರಾ ಎಂದು ಪ್ರಶ್ನಿಸಿದರು.