SIT ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ. 
ಧಾರವಾಡ

SIT ಮಾನ್ಯ ಕೊಲೆ ಪ್ರಕರಣ ತನಿಖೆಗೆ ಎಸ್​ಐಟಿ ರಚಿಸಿ

ಪ್ರಮುಖ ಮುಖ್ಯಾಂಶಗಳು

  • ಖುದ್ದು ದಲಿತರಾಗಿರುವ ಗೃಹ ಸಚಿವರಾಗಲಿ ಯಾವುದೇ ಹೇಳಿಕೆ ನೀಡದಿರುವುದು ಖಂಡನೀಯ.
  • ಸರ್ಕಾರ ಕಟ್ಟುನಿಟ್ಟಿನ ಕಾನೂನು ಜರುಗಿಸಬೇಕು.
  • ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮಾತನಾಡಿಲ್ಲ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಮರ್ಯಾದೆ ಹತ್ಯೆ ನಡೆದು ಹಲವಾರು ದಿನಗಳಾದರೂ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಲಿ, ಖುದ್ದು ದಲಿತರಾಗಿರುವ ಗೃಹ ಸಚಿವರಾಗಲಿ ಯಾವುದೇ ಹೇಳಿಕೆ ನೀಡದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಹಿಂದ ನಾಯಕನೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ಮಾತನಾಡಿಲ್ಲ. ದಲಿತ ಸಮುದಾಯಕ್ಕೆ ಸೇರಿರುವ ಹಲವಾರು ಶಾಸಕರು, ಸಚಿವರೂ ಮರ್ಯಾದೆ ಹತ್ಯೆ ಬಗ್ಗೆ ಮಾತನಾಡದಿರುವುದು ಅಚ್ಚರಿ ಮೂಡಿಸಿದೆ. ಮಹಿಳಾ ಆಯೋಗವೂ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ ಎಂದರು.
ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಸರ್ಕಾರ ಕಟ್ಟುನಿಟ್ಟಿನ ಕಾನೂನು ಜರುಗಿಸಬೇಕು. ಜಾತಿ ತೊಡೆದು ಹಾಕುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಬೇಕು ಎಂದರು.
ಆರ್. ಮುನಿಯಪ್ಪ, ವೈ.ಸಿ. ಕಾಂಬಳೆ, ಆನಂದ ಬೆಣಸಮಟ್ಟಿ, ಬಸಪ್ಪ ಮಾದರ, ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.