ಹುಬ್ಬಳ್ಳಿಯ ಸ್ಪೋರ್ಟ್ಸ್ ಶೂಟಿಂಗ್ (Sports debate) ಅಕಾಡೆಮಿಯಲ್ಲಿ ಎಸ್. ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಯುವ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡ ಸಂಕಲ್ಪ ಶೆಟ್ಟರ್ ಪಾಲ್ಗೊಂಡಿದ್ದರು. ಅಕಾಡೆಮಿ ಮುಖ್ಯಸ್ಥ ರವಿಚಂದ್ರ ಬಾಳೆಹೊಸೂರು, ಫೌಂಡೇಷನ್ ಸದಸ್ಯರು, ಶೂಟರ್ಗಳು, ತರಬೇತುದಾರರು ಹಾಗೂ ಪಾಲಕರು ಉಪಸ್ಥಿತರಿದ್ದರು.
ಹುಬ್ಬಳ್ಳಿ: ಇಂದಿನ ಯುವಕರು (Sports debate) ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗಿರದೆ, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ತಮ್ಮಿಷ್ಟದ ಕ್ರೀಡೆಗಳಲ್ಲಿ ಭಾಗಿಯಾಗಿ, ಆಸಕ್ತಿಯಿಂದ ಕ್ರೀಡಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಬೇಕು. ಜಿಲ್ಲಾ ಮಟ್ಟದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಬಿಜೆಪಿ ಯುವ ಮುಖಂಡ ಸಂಕಲ್ಪ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯಲ್ಲಿ ಭಾನುವಾರ ಎಸ್. ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಯುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶೂಟರ್ಗಳೊಂದಿಗೆ ಅವರ ಕ್ರೀಡೆ ಮತ್ತು ಭವಿಷ್ಯದ ಗುರಿಗಳ ಕುರಿತು ರ್ಚಚಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಎಲ್ಲ ಸಾಧನೆಗಳಿಗೂ ಕನಸುಗಳೇ ಅಡಿಪಾಯ. ಎಲ್ಲರೂ ಕನಸು ಕಾಣಬೇಕು, ಕಂಡ ಕನಸನ್ನು ನನಸಾಗಿಸಿಕೊಳ್ಳಲು ಹಗಲಿರುಳು ಶ್ರಮಿಸಬೇಕು. ಆಗ ವ್ಯಕ್ತಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇಂದಿನ ನವ ಭಾರತ ಕ್ರೀಡೆಗೆ ಅತ್ಯಂತ ಉತ್ತಮವಾಗಿ ಪೋ›ತ್ಸಾಹ ನೀಡುತ್ತಿದೆ, ತಾವೆಲ್ಲರೂ ಅದರ ಸದುಪಯೋಗ ಪಡೆದುಕೊಂಡು ನಿಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅಕಾಡೆಮಿ ಮುಖ್ಯಸ್ಥ ರವಿಚಂದ್ರ ಬಾಳೆಹೊಸೂರು, ಎಸ್.ಎಸ್. ಶೆಟ್ಟರ್ ಫೌಂಡೇಷನ್ ಸದಸ್ಯರು, ಶೂಟರ್ಗಳು, ತರಬೇತುದಾರರು ಹಾಗೂ ಪಾಲಕರು ಉಪಸ್ಥಿತರಿದ್ದರು.