ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Session) ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿದರು.
- ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿವೆ.
- ಸಹಾಯಧನ ಹೆಚ್ಚಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.
- ಅರ್ಹ ಫಲಾನುಭವಿಗಳಿಗೆ ಅನುದಾನ ಬಿಡುಗಡೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ (Session) ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿವೆ. ಆದಕಾರಣ, ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.
ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ರ್ಚಚಿಸಿದ್ದು, ಈ ಬಗ್ಗೆ ಬರುವ ಬಜೆಟ್ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಕಳೆದ ಅಕ್ಟೋಬರ್ ಅಂತ್ಯಕ್ಕೆ 1,324.26 ಕೋಟಿ ರೂ. ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.