ನಾಗಪ್ಪ ಉಂಡಿ 
ಧಾರವಾಡ

ಸುವರ್ಣ ವಿಧಾನಸೌಧ ಚಲೋ ಡಿ.18ರಂದು

ಧಾರವಾಡ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಡಿ.18ರಂದು ಸುವರ್ಣ ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ನಾಗಪ್ಪ ಉಂಡಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಸಚಿವರು, ಶಾಸಕರು ಉತ್ತರ ಕರ್ನಾಟಕ ಭಾಗದ ಜನರ ಹಾಗೂ ರೈತರ ಸಮಸ್ಯೆಗಳನ್ನು ಚರ್ಚಿಸದೇ ಕಾಲಹರಣ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ತರಬೇಕು. ಬೆಳೆಹಾನಿ ಪರಿಹಾರ, ಬೆಳೆವಿಮೆ ತಕ್ಷಣ ಬಿಡುಗಡೆ ಮಾಡಬೇಕು. ರೈತರ ಸಾಲಮನ್ನಾ ಮಾಡಬೇಕು, ರೈತ ವಿರೋಽ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು, ಬೆಂಬಲ ಬೆಲೆ ಯೋಜನೆಯಡಿ ರೈತರ ಬೆಳೆ ಖರೀದಿ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ರವಿರಾಜ ಕಂಬಳಿ, ರವಿ ವಡ್ಡರ, ಶಿವಾನಂದ ಸುದ್ದಿಗೋಷ್ಠಿಯಲ್ಲಿದ್ದರು.