Zaid Khan 
ಧಾರವಾಡ

ಕಲ್ಟ್ ಸಿನಿಮಾ ಜ.23ರಂದು ರಾಜ್ಯಾದ್ಯಂತ ಬಿಡುಗಡೆ

ಧಾರವಾಡ: ಕಲ್ಟ್ ಸಿನಿಮಾ ಜನವರಿ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ ಎಂದು ಚಿತ್ರದ ನಾಯಕ ನಟ ಝೈದ್ ಖಾನ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ವಿ.ಎನ್. ಪ್ರೊಡಕ್ಷನ್ಸ್, ಲೋಕಿ ಸಿನಿಮಾ ಲಾಂಛನದಲ್ಲಿ ಚಿತ್ರ ನಿರ್ಮಾಣಗೊಂಡಿದೆ. ಅನಿಲ್ ಕುಮಾರ್ ಚಿತ್ರ ನಿರ್ದೇಶಿಸಿದ್ದಾರೆ. ಜೆ.ಎಸ್.ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ ಎಂದರು.
ಇದೊoದು ಕೌಟುಂಬಿಕ, ರೊಮ್ಯಾಂಟಿಕ್, ಥ್ರಿಲ್ಲರ್ ಸಿನಿಮಾ ಆಗಿದೆ. ಹಂಪಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರನಲ್ಲಿ ಚಿತ್ರೀಕರಣ ನಡೆದಿದೆ. ಸಿನಿಮಾದಲ್ಲಿ ಆರು ಹಾಡುಗಳು ಇವೆ. ಈಗಾಗಲೇ ಚಿತ್ರದ `ಅಯ್ಯೋ ಶಿವನೇ' ಎಂಬ ಹಾಡು ಬಿಡುಗಡೆಯಾಗಿದೆ ಎಂದರು.
ಚಿತ್ರದಲ್ಲಿ ನಾಯಕಿರಾಗಿ ರಚಿತಾರಾಮ ಮತ್ತು ಮಲೈಕಾ ಟಿ. ವಸುಪಾಲ್ ಅಭಿನಯಿಸಿದ್ದಾರೆ. ರಂಗಾಯಣ ರಘು, ಅಚ್ಯುತ್ ಕುಮಾರ ನಟಿಸಿದ್ದಾರೆ. ಚಿತ್ರದಲ್ಲಿ ಹೊಸಬರಿಗೂ ಅವಕಾಶ ನೀಡಲಾಗಿದೆ. ಈಗಿನ ಕಾಲದಲ್ಲಿ ಯುವಕರು, ಯುವತಿಯರಿಂದ ಹೇಗೆ ಮೋಸ ಹೋಗುತ್ತಾರೆ? ಅದರಿಂದ ಹೇಗೆ ಹೊರಬರಹುದು ಎಂಬ ಸಂದೇಶ ಚಿತ್ರದಲ್ಲಿ ನಿರೂಪಿಸಲಾಗಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಕಲಾವಿದರಿಗೆ ಅವಕಾಶಗಳು ದೊರೆಯುತ್ತಿಲ್ಲ ಎಂಬುದರ ಬಗ್ಗೆ ತಿಳಿದಿದೆ. ಮುಂಬರುವ ನನ್ನ ಸಿನಿಮಾಗಳಲ್ಲಿ ಕನಿಷ್ಠ ಒಬ್ಬರಿದಾರೂ ಉತ್ತರ ಕರ್ನಾಟಕದ ಕಲಾವಿದರಿಗೆ ಅವಕಾಶ ನೀಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.