ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಬುಧವಾರ ಕೊಲೆ ಯತ್ನ ಪ್ರಕರಣಗಳ ಆರೋಪಿಗಳ ಪರೇಡ್‌ನಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರೋಪಿಗಳಿಗೆ ಎಚ್ಚರಿಕೆ ನೀಡಿದರು (deported)
ಹುಬ್ಬಳ್ಳಿ: ಈ ವಾರದಲ್ಲಿ ಇಬ್ಬರು ಗೂಂಡಾ ಕಾಯ್ದೆಯಡಿ ಬೇರೆ ಜಿಲ್ಲೆಯ ಕಾರಾಗೃಹಕ್ಕೆ ಕಳುಹಿಸಿದ್ದು, 26 ರೌಡಿಶೀಟರ್‌ಗಳನ್ನು ಗಡಿಪಾರು (deported) ಮಾಡಲಾಗಿದೆ. ಈ ವರ್ಷದಲ್ಲಿ ಒಟ್ಟು 6 ಗೂಂಡಾ ಕಾಯ್ದೆ, 132 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಗೂಂಡಾ ಕಾಯ್ದೆಯಡಿ ರೆಹಮತ್ ಒಟ್ಟು 27 ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಹಾಗೂ ಮಹ್ಮದ್ ರಫಿಕ್ 13 ಪ್ರಕಣದಲ್ಲಿ ಭಾಗಿಯಾಗಿದ್ದು, ಈತನನ್ನು ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಕಳಹಿಸಲಾಗಿದೆ ಎಂದರು.