Incomex ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಪದಾಧಿಕಾರಿಗಳು, ಹುಬ್ಬಳ್ಳಿಯಲ್ಲಿ ಆಯೋಜಿಸಲಾಗುತ್ತಿರುವ ಇನ್​ಕಾಮೆಕ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 
ಧಾರವಾಡ

Incomex ಇನ್​ಕಾಮೆಕ್ಸ್​ಗೆ ಕೇಂದ್ರ ಸಚಿವರಿಗೆ ಆಹ್ವಾನ

ಪ್ರಮುಖ ಮುಖ್ಯಾಂಶಗಳು

  • ಕೈಗಾರಿಕೆಗಳನ್ನು ಒಂದೇ ವೇದಿಕೆಗೆ ತರಲು ಮಾಡಲಾಗುತ್ತಿರುವ ಸಿದ್ಧತೆ.
  • ಹುಬ್ಬಳ್ಳಿಯಲ್ಲಿ ಆಯೋಜಿಸಲಾಗುತ್ತಿರುವ ಇನ್​ಕಾಮೆಕ್ಸ್.
  • ಕೈಗಾರಿಕಾ ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ಸಂಸ್ಥೆಯ ಪದಾಧಿಕಾರಿಗಳು, ಇನ್​ಕಾಮೆಕ್ಸ್ ಉದ್ದೇಶ, ಕೈಗಾರಿಕಾ ವಲಯಕ್ಕೆ ಇದರಿಂದ ಉಂಟಾಗುವ ಪ್ರಯೋಜನಗಳು ಹಾಗೂ ದೇಶದ ವಿವಿಧ ಭಾಗಗಳಿಂದ ಕೈಗಾರಿಕೆಗಳನ್ನು ಒಂದೇ ವೇದಿಕೆಗೆ ತರಲು ಮಾಡಲಾಗುತ್ತಿರುವ ಸಿದ್ಧತೆಗಳ ಬಗ್ಗೆ ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉಪಾಧ್ಯಕ್ಷ ವೀರಣ್ಣ ಕಲ್ಲೂರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಜೊತೆ ಗೌರವ ಕಾರ್ಯದರ್ಶಿ ಪ್ರಕಾಶ ಶೃಂಗೇರಿ, ಇನ್​ಕಾಮೆಕ್ಸ್ ಚೇರ್ಮನ್ ಎಂ.ವಿ ಕರಮರಿ ಹಾಗೂ ಗೋವಿಂದ ಜೋಶಿ ಈ ಸಂದರ್ಭದಲ್ಲಿ ಹಾಜರಿದ್ದರು.