state ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉತ್ತರ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಸವರಾಜ ಕರಿಗಾರ
- ಕಡಿಮೆ ವೇತನಕ್ಕೆ ವಲಸೆ ಹೋಗುವ ಸ್ಥಿತಿ ನಿಮಾಣವಾಗಿದೆ
- ಉತ್ತರ ಕರ್ನಾಟಕ ಮಹತ್ವದ ಕೊಡುಗೆ ನೀಡುತ್ತಿದೆ.
- ಅಭಿವೃದ್ಧಿಗಾಗಿ ಈ ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಾಗಬೇಕು.
ಹುಬ್ಬಳ್ಳಿ :
state ಉತ್ತರ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಸವರಾಜ ಕರಿಗಾರ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗಿನ ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿವೆ ಎಂದರು.
ರಾಜ್ಯದ ಆರ್ಥಿಕ, ಕೃಷಿ ಮತ್ತು ಕೈಗಾರಿಕಾ ಬೆಳವಣಿಗೆಗೆ ಉತ್ತರ ಕರ್ನಾಟಕ ಮಹತ್ವದ ಕೊಡುಗೆ ನೀಡುತ್ತಿದೆ. ಆದರೆ ಅಭಿವೃದ್ಧಿ ಯೋಜನೆಗಳು, ಕೈಗಾರಿಕೆಗಳು, ಸರ್ಕಾರಿ ಹೂಡಿಕೆಗಳ ವಿಚಾರದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು.
ಹೀಗಾಗಿ, ಯುವಕರು ಉದ್ಯೋಗ ಅರಸಿ ದೂರದ ಬೆಂಗಳೂರು ಸೇರಿದಂತೆ ರಾಜ್ಯದ ಹೊರ ನಗರಗಳಲ್ಲಿ ಕಡಿಮೆ ವೇತನಕ್ಕೆ ವಲಸೆ ಹೋಗುವ ಸ್ಥಿತಿ ನಿಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.
ಬಿಡದಿಯಲ್ಲಿ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಯೋಜನೆಗಳು ರೂಪಿಸಲಾಗಿದೆ.
ಆದರೆ, ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪಿಸಲು ಸೂಕ್ತ ಭೂಮಿ, ಸಂಪನ್ಮೂಲ ಮತ್ತು ಅವಕಾಶಗಳಿದ್ದರೂ ಸರ್ಕಾರ ಯಾವುದೇ ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಅಭಿವೃದ್ಧಿಗಾಗಿ ಈ ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಾಗಬೇಕು. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಕಚೇರಿಗಳನ್ನು ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸಿ, ಅಲ್ಲಿಂದಲೇ ಆಡಳಿತ ನಡೆಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಳಿಯಪ್ಪ ದಬಗಲ್ಲ, ಮಂಜುನಾಥ ಶೆಲ್ಲೆಣ್ಣನವರ, ಶ್ರೀಧರ ಅಮರಕೇಡ ಸುದ್ದಿಗೋಷ್ಠಿಯಲ್ಲಿ ಇದ್ದರು.