ಹುಬ್ಬಳ್ಳಿ ತಾಪಂ (water scarcity) ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಮಾತನಾಡಿದರು. ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ ಇದ್ದರು. 
ಧಾರವಾಡ

ಕುಡಿಯುವ ನೀರಿನ (water scarcity) ಸಮಸ್ಯೆಯಾಗದಂತೆ ಕ್ರಮವಹಿಸಿ

ಸಂತೋಷ ವೈದ್ಯ
ಹುಬ್ಬಳ್ಳಿ: ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ (water scarcity) ಸಮಸ್ಯೆ ಹೆಚ್ಚುತ್ತದೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹುಬ್ಬಳ್ಳಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಳಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸದೇ ಇರುವುದು ಗಮನಕ್ಕೆ ಬಂದಿದೆ. ಅಲ್ಲದೇ ನಳ ಸಂಪರ್ಕಕ್ಕಾಗಿ ರಸ್ತೆಗಳನ್ನು ಅಗೆದು ಹಾಕಲಾಗಿದೆ. ಅವಶ್ಯಕತೆ ಇರುವ ಕಡೆಯಲ್ಲಿ ಬೋರವೆಲ್ ಕೊರೆಯಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ರಸ್ತೆಗಳನ್ನು ಮರು ನಿರ್ವಿುಸಿ ಕೊಡಬೇಕಿದೆ. ಕೆರೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಬೇಕು. ಫೆಬ್ರವರಿ ಅಂತ್ಯದೊಳಗೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಆವರಣದಲ್ಲಿ ಔಷಧಿ ಮತ್ತು ಪೌಷ್ಟಿಕ ಆಹಾರದ ಸಸಿಗಳನ್ನು ನೆಡುವ ಮೂಲಕ ಶಾಲಾ ಪೌಷ್ಟಿಕ ವನ ನಿರ್ವಣಕ್ಕೆ ಒತ್ತು ನೀಡಬೇಕು. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಗ್ರಾಮೀಣ ಪ್ರದೇಶದ ರಸ್ತೆಗಳು, ಸರ್ಕಾರಿ ಕಚೇರಿಗಳು, ಶಾಲೆಗಳು ಮುಂತಾದ ಸ್ಥಳಗಳಲ್ಲಿ ಸಸಿಗಳನ್ನು ನೆಡಬೇಕು ಎಂದರು.
ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಕಲಿಕೆ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕಟ್ಟಡಗಳು, ಶಾಲಾ ಕಟ್ಟಡಗಳು, ಶೌಚಾಲಯಗಳ ನಿರ್ವಣಕ್ಕೆ ಗಮನಹರಿಸಬೇಕಿದೆ. ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಕ್ರಮವಹಿಸಬೇಕಾಗಿದೆ. ಸ್ಮಶಾನಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.