womens ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.
- ಮಹಿಳಾ ಮೀಸಲಾತಿಗೆ ಸೋಲಾಗಿದೆ.
- ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಅಡಿಗಲ್ಲು ಹಾಕಿದ್ದರು.
- ಜಾತಿಗಳ ವಿಚಾರದಲ್ಲಿ ಹೊಡೆದಾಡುತ್ತಿದ್ದಾರೆ.
ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
12ನೇ ಶತಮಾನದಲ್ಲಿಯೇ ಬಸವಣ್ಣನವರು ಅನುಭವ ಮಂಟಪದಲ್ಲಿ ಮಹಿಳಾ ಪ್ರಾತಿನಿಧ್ಯ ಕೊಟ್ಟಿದ್ದರು. ಆದರೆ, ಇದೀಗ ಸಂಸತ್ತಿನಲ್ಲಿ ವಿರೋಧ ಪಕ್ಷದವರಿಂದಾಗಿ ಮಹಿಳಾ ಮೀಸಲಾತಿಗೆ ಸೋಲಾಗಿದೆ ಎಂದರು.
ಜಾತಿಗಳ ಮಧ್ಯದ ಜಗಳ, ಹೊಡೆದಾಟ, ಕ್ಷೋಭೆ ನಿವಾರಣೆಗೆ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಅಡಿಗಲ್ಲು ಹಾಕಿದ್ದರು. ಆದರೂ, ಜನರು ಅವರ ತತ್ವಗಳನ್ನು ಪಾಲನೆ ಮಾಡುತ್ತಿಲ್ಲ. ಇಂದಿಗೂ ಜನರು ಜಾತಿಗಳ ವಿಚಾರದಲ್ಲಿ ಹೊಡೆದಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.