yatindra urges ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ. 
ಧಾರವಾಡ

yatindra urges ಕೇಂದ್ರ ಗೃಹ ಸಚಿವರು ಕ್ಷಮೆ ಕೇಳಲಿ

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆಗ್ರಹ
  • ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕೋಟಿ ರೂ. ಬಿಡುಗಡೆ
ಹುಬ್ಬಳ್ಳಿ: yatindra urges ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದು ಖಂಡನಾರ್ಹ. ಈ ದಿಸೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ಮೊದಲು ಟನೆ ಬಗ್ಗೆ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಈ ಬೇಡಿಕೆಯನ್ನು ಅವರು ಈಡೇರಿಸಬೇಕು. ಆನಂತರವೇ ಚರ್ಚೆಗಳು ನಡೆಯಲಿ, ಆಗ ಮಾತ್ರ ಸಂಸತ್ತು ಸುಸೂತ್ರವಾಗಿ ಮುಂದುವರಿಯಬಹುದು ಎಂದರು.
ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸಲು ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕೋಟಿ ರೂ. ಬಿಡುಗಡೆ ಮಾಡಿದೆ. ಮಳೆ ಕೊರತೆಯಾದರೆ ಬರಗಾಲ ಅಧಿಕೃತವಾಗಿ ಘೋಷಣೆಯಾಗಲಿದೆ. ನಂತರ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಅವರು ಹೇಳಿದರು.
ಕೇಂದ್ರ ಸರ್ಕಾರದ ಮುಂದಿರುವ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ದೊರಕಿಸಿ ಕೊಡಲು ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲ ಸಂಸದರು ಗಂಭಿರ ಪ್ರಯತ್ನ ಮಾಡಬೇಕು. ಇದು ಅವರ ಕರ್ತವ್ಯ ಕೂಡ ಆಗಬೇಕು. ರಾಜ್ಯ ಸರ್ಕಾರ ಈಗಾಗಲೇ ತನ್ನ ಬೇಡಿಕೆಗಳನ್ನು ಕೇಂದ್ರಕ್ಕೆ ಸಲ್ಲಿಸಿದೆ. ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ಸಂಸದರು, ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಡಾ. ಯತೀಂದ್ರ ಒತ್ತಾಯಿಸಿದರು.