BJP ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಭಾವಿ ಸಭೆಯಲ್ಲಿ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
- ಹುಬ್ಬಳ್ಳಿಯಲ್ಲಿ ಬಿಎಸ್ವೈ ಅಭಿಮಾನೋತ್ಸವ ಪೂರ್ವಭಾವಿ ಸಭೆ
- ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯಮಟ್ಟದಲ್ಲಿ ಬೆಳೆದು, ಮುಖ್ಯಮಂತ್ರಿಯಾಗಿದ್ದಾರೆ.
- ಈದ್ಗಾ ಮೈದಾನ ಹೋರಾಟದಲ್ಲಿ ಯಡಿಯೂರಪ್ಪ ಸಕ್ರೀಯವಾಗಿ ಪಾಲ್ಗೊಂಡಿದ್ದರು.
ಹುಬ್ಬಳ್ಳಿ :
ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿಯ ಈದ್ಗಾ ಮೈದಾನ ಹೋರಾಟದಲ್ಲಿ ಯಡಿಯೂರಪ್ಪ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಪ್ರಲ್ಹಾದ ಜೋಶಿ, ಅನಂತಕುಮಾರ, ಅನಂತಕುಮಾರ ಹೆಗಡೆ, ಈಶ್ವರಪ್ಪ ಸೇರಿದಂತೆ ಅನೇಕ ನಾಯಕರು ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದರು.
ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯಮಟ್ಟದಲ್ಲಿ ಬೆಳೆದು, ಮುಖ್ಯಮಂತ್ರಿಯಾಗಿದ್ದಾರೆ. ಮೇ 9ರಂದು ಮಧ್ಯಾಹ್ನ 3ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ವಿಭಾಗೀಯ ಪ್ರಭಾರಿ ಜಯತೀರ್ಥ ಕಟ್ಟಿ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ವಿಶೇಷವಾಗಿ ಭಾಗ್ಯಲಕ್ಷ್ಮೀ ಯೋಜನೆ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ನೀಡಿ ಮನೆ ಮಾತಾಗಿದ್ದಾರೆ ಎಂದರು.
ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮಹಾನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಸಂತ ನಾಡಜೋಶಿ, ಮಂಜುನಾಥ ಕಾಟಕರ, ಸತೀಶ ಶೇಜವಾಡಕರ, ಮಣಿಕಂಠ ಶಾಗೋಟಿ ಹಾಗೂ ಇತರರಿದ್ದರು.