ಜಿಲ್ಲೆ

ಡಾ.ವಿರೇಂದ್ರ ಹೆಗಡೆ ಹೆಸರು ಕೆಡಿಸುವ ಹುನ್ನಾರ!; ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜ ಆರೋಪ

ಬೆಳಗಾವಿ : ಜಾತಿ-ಧರ್ಮ ಮೀರಿದ ದೇಶದ ಪ್ರಮುಖ ಶ್ರದ್ಧಾ ಕೇಂದ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹಗಡೆ ಅವರ ಹೆಸರು ಕೆಡಿಸುವ ಹುನ್ನಾರ ನಡೆದಿದೆ. ಮೃತ ವಿದ್ಯಾರ್ಥಿನಿ ಸೌಜನ್ಯ ನಮ್ಮ ತಂಗಿ, ತಾಯಿಯ ಸಮಾನ. ಧರ್ಮಾಧಿಕಾರಿ ಹೆಸರಿಗೆ ಕಪ್ಪು ಚುಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಹಲಗಾ-ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಹಲಗಾ-ಬಸ್ತವಾಡ ಆಶ್ರಮದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಸೌಜನ್ಯ ಹತ್ಯೆಯಾಗಿ 10 ವರ್ಷಗಳೇ ಕಳೆದಿವೆ, ಆದರೂ, ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ತನಿಖಾಧಿಕಾರಿಗಳು ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರನ್ನು ಎಳೆದುತರಲಾಗುತ್ತಿದೆ. ಕಾನೂನು ಪ್ರಕಾರ ನಿಜವಾದ ಆರೋಪಿಗೆ ಶಿಕ್ಷೆಯಾಗಲೇ ಬೇಕು ಎಂದು ಡಾ.ವೀರೇಂದ್ರ ಹೆಗಡೆ ಅವರೂ ಒತ್ತಾಯಿಸಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಹೋಗಿಯಾದರೂ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಪ್ರಕರಣದ ತನಿಖಾಧಿಕಾರಿಗಳು ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದರು.

ಇನ್ನು ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಕಾಮಕುಮಾರ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧ ದೇಶಾದ್ಯಂತ ಹೋರಾಟಗಳು ನಡೆದಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ನೀಡಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಆಗುವ ವಿಶ್ವಾಸ ಇದೆ ಎಂದರು.