ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು. ಯತೀಶ್, ವರಪ್ರಸಾದ್, ದಿವಾಕರ್, ಪಂಕಜ ಪ್ರಕಾಶ್ ಇದ್ದರು. 
ಜಿಲ್ಲೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾದರಿ

ಅಭಿನಯ್ ಎಚ್.ಎಂ

ಶನಿವಾರಸಂತೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಗಳು ಮನುಷ್ಯ ಜೀವನದ ಎಲ್ಲ ಸಂದರ್ಭಗಳಲ್ಲೂ ಸಹಕಾರಿ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್‌ನ ಕೊಡ್ಲಿಪೇಟೆ ವಲಯ ಹಾಗೂ ಕ್ರೀಡಾ ಸಮಿತಿ ಮತ್ತು ಕೊಡ್ಲಿಪೇಟೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸೌಹಾರ್ದ ಕ್ರೀಡಾಕೂಟ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರೂಪಿಸಿರುವ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶಗಳು ಎಲ್ಲ ರೀತಿಯಲ್ಲೂ ಅಭಿವೃದ್ಧಿ ಕಾಣುತ್ತಿವೆ. ಸರ್ಕಾರದ ಯೋಜನೆಗಳ ಪ್ರಗತಿಗೆ ಗ್ರಾಮಾಭಿವೃದ್ಧಿ ಸಂಸ್ಥೆ ಕೈಜೋಡಿಸುತ್ತಿದೆ. ಗ್ರಾಮಾಭಿವೃದ್ದಿ ಸಂಸ್ಥೆಯ ಹಲವಾರು ಕಾರ್ಯಕ್ರಮ ಜನರಿಗೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳು ಯೋಜನೆಗಳ ಮೂಲಕ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜತೆ ಶಿಸ್ತು, ಬದ್ಧತೆ ಅಳವಡಿಸಿಕೊಂಡು ಸಮಾಜದಲ್ಲಿ ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್.ಚಂದ್ರಮೌಳಿ, ವೀರೇಂದ್ರ ಹೆಗ್ಗಡೆ ಅವರು ಪ್ರಜಾಪ್ರಭುತ್ವದ ಆಶಯಗಳನ್ನು ಗ್ರಾಮ ಮಟ್ಟದಲ್ಲಿ ಸಕಾರಗೊಳಿಸುತ್ತಿದ್ದು, ಶಿಸ್ತು ಬದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿರುವ ಎಸ್.ಆರ್.ಅಮೃತಾ, ಕರವೇ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ಸುಜ್ಞಾನ ನಿಧಿ ಶಿಷ್ಯ ವೇತನ, ಮಾಸಾಶನ, ಆರೋಗ್ಯ ರಕ್ಷಾ ಹಾಗೂ ಮೈಕ್ರೋ ಬಜೆಟ್ ಕ್ಲೇಮ್ ಮುಂತಾದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.


ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಭಗವಾನ್, ಕೊಡ್ಲಿಪೇಟೆ ಪ್ರಾಧಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಬಿ.ಕೆ.ಯತೀಶ್, ತಾಲೂಕು ಯೋಜನಾಧಿಕಾರಿ ರೋಹಿತ್, ಒಕ್ಕಲಿಗರ ಯುವ ವೇದಿಕೆಯ ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷ ನಾಗೇಶ್, ನಿವೃತ್ತ ಸೈನಿಕ ಮನು, ಪ್ರಮುಖರಾದ ವಸಂತ್, ಮಂಜುಳಾ ಸುರೇಶ್, ಶಿಲ್ಪಿ ವರಪ್ರಸಾದ್, ದಿವಾಕರ್, ಪಂಕಜಾ, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ಶಾಂತಳ್ಳಿ ವಲಯ ಮೇಲ್ವಿಚಾರಕ ಲಕ್ಷ್ಮಣ್, ಕಚೇರಿಯ ಸಹಾಯಕ ಪ್ರಬಂಧಕ ಜಿತೇಂದ್ರ, ನಗದು ಮೇಲ್ವಿಚಾರಕ ರಾಘವೇಂದ್ರ ಇತರರಿದ್ದರು.
ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗೆ ವಿವಿಧಾ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಪಾಲ್ಗೊಂಡವರು