ಜಿಲ್ಲೆ

ಮುರುಘಾಮಠ ಜಾತ್ರೆ ಅದ್ಧೂರಿ ರಥೋತ್ಸವ

ಮಂಜುನಾಥ ಅಂಗಡಿ

ಧಾರವಾಡ: ನಗರದ ಮುರುಘಾಮಠದ ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ ೯೪ನೇ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ ರಥೋತ್ಸವ ಜರುಗಿತು.
ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಮುರುಘಾಮಠದಿಂದ ಹೊರಟ ರಥವು ಹಾವೇರಪೆಠ ವೃತ್ತಕ್ಕೆ ತೆರಳಿ ಶ್ರೀ ಮಠಕ್ಕೆ ಮರಳಿತು. ಭಕ್ತರು ಮÁರ್ಗದುದ್ದಕ್ಕೂ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.
ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ವಿರೂಪಾಕ್ಷ ಸ್ವಾಮೀಜಿ, ಶ್ರೀ ಬಸವಶಾಂತಲಿAಗ ಸ್ವಾಮೀಜಿ, ಶ್ರೀ ಸ್ವಾಮಿನಾಥ ಸ್ವಾಮೀಜಿ, ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಇತರರು ಸಮ್ಮುಖ ವಹಿಸಿದ್ದರು.
ಜಾತ್ರಾ ಮಹೋತ್ಸವದ ಅಂಗವಾಗಿ ಮಠದಲ್ಲಿ ಬೆಳಗ್ಗೆ ಮುರುಘಾಮಠದ ಪೀಠಾಧ್ಯಕ್ಷ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಲಿಂಗದೀಕ್ಷೆ ಕಾರ್ಯಕ್ರಮ ನೆರವೇರಿತು. ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ನೂರಾರು ವಟುಗಳಿಗೆ ದೀಕ್ಷೆ ನೀಡಿದರು. ಮಠದ ಆಡಳಿತ ಮಂಡಳಿಯ ಪದಾಽಕಾರಿಗಳು ಉಪಸ್ಥಿತರಿದ್ದರು.