ಜಿಲ್ಲೆ

ವಿವಿಧ ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗಳ ಭರ್ತಿ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಜಿಲ್ಲೆಯ ರಾಮದುರ್ಗ, ರಾಯಬಾಗ, ಹುಕ್ಕೇರಿ, ಬೈಲಹೊಂಗಲ ಹಾಗೂ ಸವದತ್ತಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಗಳ ಭರ್ತಿಗೆ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಕೀಲರು, ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಅವಶ್ಯಕ ದೃಢೀಕರಣ ನಕಲುಗಳನ್ನು ಲಗತ್ತಿಸಿ 2024 ಆಗಸ್ಟ್ 14 ರೊಳಗಾಗಿ "ಆಡಳಿತ ಶಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಳಗಾವಿ" ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ನಿಗದಿತ ಅವಧಿಯ ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

***