ಹೊಸಕೋಟೆಯ ಚಿಂತಾಮಣಿ ರಸ್ತೆಯಲ್ಲಿ ಕೊಲೆಯಾದ ಸ್ಥಳವನ್ನು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಪರಿಶೀಲಿಸಿದರು.  
ಜಿಲ್ಲೆ

ಆಸ್ತಿ ವಿಚಾರಕ್ಕೆ ಚಿಕ್ಕಮ್ಮನನ್ನೇ ಕೊಂದ?

ಬೆಂಗಳೂರು ಗ್ರಾಮಾಂತರ ಡೆಸ್ಕ್

ಹೊಸಕೋಟೆ:ನಗರದ ಚಿಂತಾಮಣಿ ರಸ್ತೆಯಲ್ಲಿ ಚಿಕ್ಕಮ್ಮನನ್ನೇ ಅಕ್ಕನ ಮಗ ಕೊಲೆ ಮಾಡಿ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆನೇಕಲ್ ತಾಲೂಕಿನ ದೊಮ್ಮಸಂದ್ರದ ಚಂದ್ರಮ್ಮ(48) ಮೃತೆ. ಸೋಮವಾರ ದ್ವಿಚಕ್ರ ವಾಹನದಲ್ಲಿ ಚಂದ್ರಮ್ಮ ಕೈವಾರದ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಅಕ್ಕನ ಮಗ ವೆಂಕಟೇಶ್ (37) ಬೈಕ್ ತಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳ ಪರಿಶೀಲಿಸಿದರು.
ಆಸ್ತಿ ವಿಚಾರಕ್ಕೆ ಈ ಮೊದಲು ಕುಟುಂಬಗಳ ನಡುವೆ ಜಗಳವಾಗಿದ್ದು, ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.