ಜಿಲ್ಲೆ

ನಡೆಯದ ದಿಂಗಾಲೇಶ್ವರ ಸ್ವಾಮೀಜಿ ಆಟ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವವರೆಗೆ ಹೂವಿನ ಮಾಲೆ ಧರಿಸುವುದಿಲ್ಲ ಎಂದು ಘೋಷಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ಆಶಯ ಸಧ್ಯದ ಪರಿಸ್ಥಿತಿಯಲ್ಲಿ ಮುಂದಿನ ಐದು ವರ್ಷಗಳವರೆಗಂತೂ ಈಡೇರದಂತಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಉದ್ದೇಶವೆಂದು ಬಹಿರಂಗ ಹೇಳಿಕೆ ನೀಡಿದ್ದರು ದಿಂಗಾಲೇಶ್ವರ ಸ್ವಾಮೀಜಿ. ಯಾವುದೇ ಸಂದರ್ಭದಲ್ಲಿ ನಾಮಪತ್ರ ಹಿಂಪಡೆಯುವುದಿಲ್ಲವೆಂದು ಸಾರಿದ್ದ ದಿಂಗಾಲೇಶ್ವರ ಸ್ವಾಮೀಜಿ, ನಂತರ ನಡೆದ ಬೆಳವಣಿಗೆಯಲ್ಲಿ ನಾಮಪತ್ರ ಹಿಂಪಡೆದರು. ಚುನಾವಣೆ ಕಣದಿಂದ ಹಿಂದೆ ಸರಿದರೂ, ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸಿದ್ದರು.

ಆದರೆ, ಮಂಗಳವಾರ ಪ್ರಕಟಗೊಂಡ ಚುನಾವಣೆ ಫಲಿತಾಂಶದಲ್ಲಿ ಪ್ರಲ್ಹಾದ ಜೋಶಿ ಅವರು ಗೆದ್ದಿದ್ದು, ದಿಂಗಾಲೇಶ್ವರ ಸ್ವಾಮೀಜಿ ಅವರ ಆಟ ನಡೆಯಲೇ ಇಲ್ಲ.