ಜಿಲ್ಲೆ

ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ

Bengaluru - General - Rama Kishan K V

ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ ಎಸ್​ಎಸ್​ಎಲ್​ಸಿ, ಪಿಯುಸಿ ಹಾಗೂ ಪದವಿ ಹೊಂದಿದ ಅಭ್ಯರ್ಥಿಗಳಿಗಾಗಿ ಆಗಸ್ಟ್ 30ರಂದು ನೇರ ಸಂದರ್ಶನವನ್ನು ಆಯೋಜಿಸಿದೆ.

ಕೆ.ಜಿ.ರಸ್ತೆಯಲ್ಲಿರುವ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30 ರಿಂದ ಸಂದರ್ಶನ ಪ್ರಕ್ರಿಯೆ ಆರಂಭವಾಗಲಿದೆ. ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಸೂಕ್ತ ವಿದ್ಯಾರ್ಹತೆ ಹೊಂದಿರುವ 35 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ನೇರಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ&ವಿವರಗಳ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.