ಜಿಲ್ಲೆ

ಜು.21ರಂದು ಉದ್ಯೋಗದ ಆಯ್ಕೆಗೆ ನಗರದಲ್ಲಿ ನೇರ ಸಂದರ್ಶನ

ಕೆ.ಎನ್.ರಾಘವೇಂದ್ರ

ಮಂಡ್ಯ: ಅಡೆಕ್ಕೊ ಇಂಡಿಯಾ ಗ್ರೂಪ್ ವತಿಯಿಂದ ವಿವಿಧ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಜು.21ರಂದು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೊಮೋ(ಯಾವುದೇ ದರ್ಜೆ) ವಿದ್ಯಾರ್ಹತೆಯನ್ನು ಹೊಂದಿರುವ 18 ರಿಂದ 24 ವರ್ಷದೊಳಗಿನವರು 2 ಭಾವಚಿತ್ರ, ಸ್ವವಿವರ, ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಬೆಳಗ್ಗೆ 10ಗಂಟೆಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ಮೊ.ಸಂ 8217803781 ಅಥವಾ ದೂ.ಸಂ 08232-295124 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.