ಕುಂದಾಪುರ: ಕುಂದಾಪುರ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ವಿದ್ಯಾವಂತ ನಿರುದ್ಯೋಗಿ ಯುವಜನರ ಜತೆ ಮುಖ್ಯಮಂತ್ರಿ ಮಾತುಕತೆ ನಡೆಸಿದರು. ಕೊರಗ ಸಮುದಾಯದ ಯುವಜನರಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವಂತೆ ಹಾಗೂ ಇನ್ನಿತರ ಬೇಡಿಕೆ ಬಗ್ಗೆ ಮನವಿ ಸಲ್ಲಿಸಿದರು. ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಣದೀಪ್, ಎಸ್ಸಿ ಎಸ್ಟಿ ಕೋಶದ ನಿರ್ದೇಶಕಿ ಊರ್ಮಿಳಾ, ಬುಡಕಟ್ಟು ಕಲ್ಯಾಣ ಇಲಾಖೆ ನಿರ್ದೇಶಕ ಕೆ.ಯೋಗೀಶ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಒಕ್ಕೂಟ ಅಧ್ಯಕ್ಷೆ ಸುಶೀಲಾ ನಾಡ, ಉಪಾಧ್ಯಕ್ಷೆ ಪವಿತ್ರಾ, ಸಂಯೋಜಕ ಪುತ್ರ ಕೆ., ಮುಖಂಡರಾದ ಬೊಗ್ರ ಕೊಕ್ಕರ್ಣೆ, ಶೀನ ಕಾಂಜರಕಟ್ಟಿ, ನರಸಿಂಹ ಪೆರ್ಡೂರು, ಲೀಲಾ ಕಾಪು, ಪ್ರೀತಿ, ಸುಪ್ರಿಯಾ, ಪ್ರತಿಕ್ಷಾ, ರಕ್ಷಿತಾ, ಸಮಗ್ರ ಗ್ರಾಮೀಣ ಆಶ್ರಮ ಅಧ್ಯಕ್ಷ ಅಶೋಕ್ ಉಪಸ್ಥಿತರಿದ್ದರು.