ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಸಂಭವನೀಯ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯಲ್ಲಿ ಅಽಕಾರಿಗಳಿಗೆ ಸೂಚನೆ ನೀಡಿದರು.
ಮಳೆಯಿಂದ ಕೆರೆ, ಹಳ್ಳಗಳು ಭರ್ತಿಯಾಗುತ್ತಿದ್ದು, ಜೀವ ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರವಾಹ ಉಂಟಾದರೆ ಬಾಽತ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಸ್ಥಳ ಗುರುತಿಸಿಕೊಳ್ಳಬೇಕು. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ಸಿಗುವಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ಮತ್ತು ಗ್ರಾಮ ಆಡಳಿತ ಅಽಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಮಳೆ ಹಾನಿ, ಪ್ರವಾಹ, ಸಾರ್ವಜನಿಕ ದೂರುಗಳ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಆಡಳಿತಕ್ಕೆ ವರದಿ ನೀಡಬೇಕು. ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದರು.
ಮನೆ ಹಾನಿ ಬಗ್ಗೆ ನಿಖರ ವರದಿ ಇರಲಿ: ಕೆಲ ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾದ ವರದಿ ಆಗುತ್ತಿವೆ. ಮನೆ ಹಾನಿ ಬಗ್ಗೆ ನಿಖರ ವರದಿ ಸಲ್ಲಿಸಬೇಕು. ಒತ್ತಡ, ಪ್ರಭಾವಕ್ಕೆ ಒಳಗಾಗಿ ತಪ್ಪು, ಅಪೂರ್ಣ ಅಥವಾ ಸುಳ್ಳು ವರದಿ ಸಲ್ಲಿಸಿಸುವ ಮತ್ತು ಅದನ್ನು ಅಂಗೀಕರಿಸುವ ಅಽಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗುವುದು ಎಂದರು.
ಗೈರಾದವರಿಗೆ ಎಚ್ಚರಿಕೆ: ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆ ನಿರಂತರವಾಗಿ ನಡೆಯುತ್ತಿದೆ. ಕೆಲ ಇಲಾಖೆಗಳ ಅಽಕಾರಿಗಳು ಪೂರ್ವಾನುಮತಿ ಇಲ್ಲದೆ ಗೈರಾಗುತ್ತಿದ್ದಾರೆ. ಸಂಬAಽಸಿದ ಇಲಾಖೆಗಳ ಅಽಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಉಪ ವಿಭಾಗಾಽಕಾರಿ ಶಾಲಂ ಹುಸೇನ್, ಜಿಲ್ಲಾ ಆರೋಗ್ಯ ಅಽಕಾರಿ ಡಾ. ಶಶಿ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ಎಂ., ತಹಸೀಲ್ದಾರರು, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆ ಅಽಕಾರಿಗಳು ಉಪಸ್ಥಿತರಿದ್ದರು.