ಮಂಡ್ಯ: ಹಿಂದುಳಿದ ವರ್ಗಗಳ ಆಯೋಗದಿಂದ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರಾದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.
ಸಮೀಕ್ಷೆಗೆ ಜಿಲ್ಲಾಡಳಿತದಿಂದ 5000 ಗಣತಿದಾರರು ಮತ್ತು ಸಿಬ್ಬಂದಿ ನೇಮಕ ಮಾಡಲಾಗಿತ್ತು. ಆದರೆ ಸುಮಾರು 120 ಸಿಬ್ಬಂದಿ ಹಾಜರಾಗಿರದ ಕಾರಣ ಗಣತಿ ಕಾರ್ಯ ಪ್ರಾರಂಭಿಸಿಲ್ಲ. ಆದ್ದರಿಂದ ಗೈರಾಗಿರುವ ಸಿಬ್ಬಂದಿ ಸೆ.29ರಂದು ಬೆಳಗ್ಗೆ 7 ಗಂಟೆಗೆ ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಬಳಿ ವರದಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಗೈರು ಹಾಜರಿ ಬಗೆ ಮಾಹಿತಿ ಪಡೆದುಕೊಂಡು ಸೇವೆಯಿಂದ ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.