ಜಿಲ್ಲೆ

ನಿರ್ಲಕ್ಷ್ಯದಿಂದ ಸಂಕ್ರಾಮಿಕ ರೋಗ ಹರಡಿದರೆ ಶಿಸ್ತು ಕ್ರಮ

ಧಾರವಾಡ: ಮಳೆಗಾಲ ಆರಂಭವಾಗುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯದಿಂದ ಸಂಕ್ರಾಮಿಕ ರೋಗ ಹರಡಿದರೆ ಅಂಥವರ ವಿರುದ್ದ ಸಾರ್ವಜನಿಕ ಆರೋಗ್ಯ ರಕ್ಷಣೆ ಕಾಯ್ದೆಯಡಿ, ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿಯಿಂದ ಏಪ್ರಿಲ್‌ವರೆಗೆ ಸುಮಾರು 451 ವಾಂತಿ- ಭೇದಿ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಮಳೆಗಾಲದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆಯಬೇಕು ಎಂದರು.
ಜಾತ್ರೆ, ವಿವಾಹ ಹಾಗೂ ಹೆಚ್ಚಿನ ಜನ ಸೇರುವ ಸ್ಥಳಗಳಲ್ಲಿ ಸರಬರಾಜು ಆಗುವ ಕುಡಿಯುವ ನೀರು, ಉಪಹಾರ, ಊಟವನ್ನು ಪರಿಶೀಲನೆ ಮಾಡಬೇಕು. ಆರೋಗ್ಯ ಇಲಾಖೆಯು ಸ್ಥಳೀಯ ಸಂಸ್ಥೆಯ ಸಹಯೋಗಗೊಂದಿಗೆ ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.
ಸಾAಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮತ್ತು ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಘಿ, ಚಿಕೂನ್‌ಗುನ್ಯ, ಮೆದುಳು ಜ್ವರ ನಿಯಂತ್ರಣಕ್ಕಾಗಿ ಸಂಬAಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಮಹಾನಗರ ಪಾಲಿಕೆ ಅಽಕಾರಿಗಳು ಬೀದಿನಾಯಿ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು. ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಬೇಕು. 3 ತಿಂಗಳಲ್ಲಿ ಕೈಗೊಂಡ ವರದಿ ಸಲ್ಲಿಸಬೇಕು ಎಂದರು.
ಸAಭವನೀಯ ಪ್ರವಾಹವು ಸಾರ್ವಜನಿಕರ ಆರೋಗ್ಯದ ಮೇಲೆ ಗಣನೀಯ ಪರಿಣಾಮ ಬಿರುತ್ತದೆ. ಪ್ರವಾಹ ನಂತರ ಉಂಟಾಗಬಹುದಾದ ಅತಿಸಾರ ಭೇದಿ ಮತ್ತು ಕಾಲರಾ, ಕರುಳುಬೇನೆ ಪ್ರಕರಣಗಳನ್ನು ಗುರುತಿಸಲು ಮತ್ತು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದರು.