ಗಂಗಾವತಿ ಎಪಿಎಂಸಿ ಸಮುದಾಯ ಭವನದಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ 7ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಅನ್ನು ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್ ಉದ್ಘಾಟಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಅಜ್ಮೀರ್ ನಂದಾಪುರ, ಟ್ರಸ್ಟ್ ಅಧ್ಯಕ್ಷ ಜಬೀವುಲ್ಲಾ, ನಗರಸಭೆ ಮಾಜಿ ಸದಸ್ಯ ಜವಳಗೇರಾ ಹುಸೇನ್‌ಪೀರಾ, ಮುಖಂಡರಾದ ಾರೂಕ್, ಮಹೆಬೂಬ್, ಪ್ರೀತಮ್, ಸೌಮ್ಯಾ ಇತರರಿದ್ದರು. 
ಜಿಲ್ಲೆ

ಶಿಸ್ತು-ಏಕಾಗ್ರತೆ ಹೆಚ್ಚಳಕ್ಕೆ ಸಹಕಾರಿ

ರುದ್ರಪ್ಪ ವಾಲಿ

ಗಂಗಾವತಿ: ಆತ್ಮರಕ್ಷಣೆಗೆ ಕರಾಟೆ ಕಲಿಕೆ ಪೂರಕವಾಗಿದ್ದು, ದೈಹಿಕ ಮತ್ತು ಮಾನಸಿಕ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್ ಹೇಳಿದರು.

ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್‌ನಿಂದ ಭಾನುವಾರ ಹಮ್ಮಿಕೊಂಡಿದ್ದ 7ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟಿಸಿ ಮಾತನಾಡಿದರು.
ಇದನ್ನು ಓದಿ: ವಿದ್ಯಾರ್ಥಿಗಳು ಶಿಸ್ತು, ಸಂಯಮ ಅಳವಡಿಸಿಕೊಳ್ಳಲಿ

ಹೆಣ್ಣು ಮಕ್ಕಳಿಗೆ ಕರಾಟೆ ಕಲಿಸುವ ನಿಟ್ಟಿನಲ್ಲಿ ಪಾಲಕರು ಗಮನಹರಿಸಬೇಕಿದ್ದು, ಶಿಸ್ತು ಮತ್ತು ಏಕಾಗ್ರತೆ ಹೆಚ್ಚಿಸಲಿದೆ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಅಜ್ಮೀರ್ ನಂದಾಪುರ ಮಾತನಾಡಿ, ಪ್ರತಿ ಶಾಲೆ, ಕಾಲೇಜುಗಳಲ್ಲಿ ಕರಾಟೆ ತರಬೇತಿ ಕಡ್ಡಾಯವಾಗಬೇಕಿದೆ ಎಂದರು. ಕಾರ್ಯಕ್ರಮ ಕುರಿತು ಟ್ರಸ್ಟ್ ಅಧ್ಯಕ್ಷ ಜಬೀವುಲ್ಲಾ ಮಾಹಿತಿ ನೀಡಿದರು. ತಮಿಳುನಾಡು, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಸೇರಿ ವಿವಿಧ ಭಾಗದಿಂದ 400ಕ್ಕೂ ಹೆಚ್ಚು ಕರಾಟೆ ಪಟುಗಳು ಭಾಗವಹಿಸಿದ್ದರು. ಕರಾಟೆ ತರಬೇತುದಾರರಾದ ಸೈಯದ್ ಬಿಲಾಲ್, ಈ.ಲಿಂಗರಾಜ್, ಅನ್ವರ್ ಪಾಷಾ ಇತರರಿದ್ದರು.