ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಹೊಸವಿದ್ಯಾರ್ಥಿಗಳ ಸುಪ್ತ-ಪ್ರತಿಭಾನ್ವೇಷಣೆ  
ಜಿಲ್ಲೆ

ಹೊಸ ವಿದ್ಯಾರ್ಥಿಗಳ ಸುಪ್ತ-ಪ್ರತಿಭಾನ್ವೇಷಣೆ

ಗಂಗೊಳ್ಳಿ: ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಹೊಸ ವಿದ್ಯಾರ್ಥಿಗಳ ಸುಪ್ತ-ಪ್ರತಿಭಾನ್ವೇಷಣ ಕಾರ್ಯಕ್ರಮ ಶನಿವಾರ ನಡೆಯಿತು.
ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕ ಪಠಣ, ಕರಾಟೆ, ಯೋಗ, ಭಜನೆ, ಏಕಪಾತ್ರಾಭಿನಯ, ಸಮೂಹ ಗಾಯನ, ಕಿರು ನಾಟಕ, ಸಮೂಹನೃತ್ಯ, ಜಾದೂ ಪ್ರದರ್ಶನ ಮೊದಲಾದ ತಮ್ಮ ಆಸಕ್ತಿಯ ಹವ್ಯಾಸಿ ಚಟುವಟಿಕೆಗಳ ಪ್ರದರ್ಶನ ನೀಡಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಶರಣಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ ಉಪಸ್ಥಿತರಿದ್ದರು. ಸೌಭಾಗ್ಯ ಕಾರ್ಯಕ್ರಮ ನಿರೂಪಿಸಿದರು.