ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಪದಾಧಿಕಾರಿಗಳು ಕೊಪ್ಪಳದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ತಾರತಮ್ಯ ಧೋರಣೆ ಕೈಬಿಡುವಂತೆ ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟ ಆಗ್ರಹ

ಕೊಪ್ಪಳ: ಖಾಸಗಿ ಶಾಲೆಗಳ ಬಗ್ಗೆ ಶಿಕ್ಷಣ ಸಚಿವರು ಅನುಸರಿಸುತ್ತಿರುವ ತಾರತಮ್ಯ ಧೋರಣೆ ಕೈ ಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ನಗರದ ಡಿಸಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಕಳೆದ 6 ತಿಂಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿವೆ. ಶಿಕ್ಷಣ ಸಚಿವರು ಮಾಧ್ಯಮಗಳ ಮುಂದೆ ಗೊಂದಲದ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ವಿದ್ಯಾಗಮ ಯೋಜನೆ ಮೂಲಕ ತರಗತಿ ನಡೆಸಲು ಅನುಮತಿಸಲಾಗಿದೆ. ಆದರೆ, ನಮಗೆ ತರಗತಿ ನಡೆಸಲು ಅನುಮತಿಸದೇ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರು ಖಾಸಗಿ ಶಾಲೆಗಳ ಬಗ್ಗೆ ಗೊಂದಲದ ಹೇಳಿಕೆ ನೀಡುವುದನ್ನು ಕೈಬಿಡಬೇಕು. ನಮಗೂ ತರಗತಿ ನಡೆಸಲು ಅನುಮತಿ ಕೊಡಬೇಕು. ಕಡ್ಡಾಯ ದಾಖಲಾತಿಗೆ ಸೂಚಿಸಬೇಕು. ಶಾಲೆ ಪುನರಾರಂಭದ ಕುರಿತು ಸ್ಪಷ್ಟ ಆದೇಶ ನೀಡಬೇಕು. ಖಾಸಗಿ ಶಾಲೆ ಶಿಕ್ಷಕರಿಗೆ ಕೋವಿಡ್ ಪರಿಹಾರ ಘೋಷಿಸಬೇಕು. ಕೆಕೆಆರ್‌ಡಿಬಿಂದ ಖಾಸಗಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು. ಸಂಘದ ಗೌರವಾಧ್ಯಕ್ಷ ರಾಘವೇಂದ್ರ ಪಾನಘಂಟಿ, ಅಧ್ಯಕ್ಷ ಜಗನ್ನಾಥ ಆಲಂಪಲ್ಲಿ, ಕಾರ್ಯದರ್ಶಿ ಪ್ರಲ್ಹಾದ ಅಗಳಿ ಇತರರು ಇದ್ದರು.