ಜಿಲ್ಲೆ

ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಬಗ್ಗೆ ಪುನರ್​ಚಿಂತನೆ

rameshmysuru

ಬೆಂಗಳೂರು : ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಬೃಂದಾವನ ಗಾರ್ಡನ್ ಅನ್ನು ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಹು ಚರ್ಚಿತ ವಿಷಯ. ಸರ್ಕಾರ ಉರುಳಿದಂತೆ ಯೋಜನೆ ಕೂಡ ಹಳ್ಳ ಹಿಡಿದಿತ್ತು. ಇದೀಗ ಪುನಃ ಆ ಯೋಜನೆಯ ಆರಂಭಕ್ಕೆ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಿ ಕೆ.ಆರ್​.ಎಸ್​. ಬೃಂದಾವನ ಗಾರ್ಡನ್ಸ್​ಅನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಮಹತ್ವದ ಸಭೆ ನಡೆಯುತ್ತಿದೆ. ಈ ಯೋಜನೆಯು 2 ಸಾವಿರ ಕೋಟಿ ರೂ. ಮೊತ್ತದ್ದಾಗಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವು ಚಟುವಟಿಕೆಗಳನ್ನು ಒಂದೇ ಸೂರಿನಡಿ ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಮಾಡಲು ಉದ್ದೇಶಿಸಲಾಗಿದೆ. ಮೈಸೂರು ನಗರದಿಂದ 12 ಕಿಲೋಮೀಟರ್ ದೂರದಲ್ಲಿರುವ ಈ ಪ್ರವಾಸಿ ಸ್ಥಳವನ್ನು ಮತ್ತಷ್ಟು ಆಕರ್ಷಣೆಯ ಸ್ಥಳವಾಗಿಸುವ ಚಿಂತನೆ ನಡೆದಿದೆ.

ಎಚ್​​.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​​-ಕಾಂಗ್ರೆಸ್​ ಮೈತ್ರಿ ಸರ್ಕಾರದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಬಗ್ಗೆ ಪ್ರಸ್ತಾಪವಾಗಿತ್ತು. ಪರ ವಿರೋಧವೂ ವ್ಯಕ್ತವಾಗಿತ್ತು. ಆಗ ಸಚಿವರಾಗಿದ್ದ ಕಾಂಗ್ರೆಸ್​​ನ ಡಿ.ಕೆ.ಶಿವಕುಮಾರ್ ಅವರು, ಕೆಆರ್‌ಎಸ್‌ಗೆ ತೆರಳಿ ಯೋಜನೆ ಜಾರಿ ಕುರಿತು ಸಭೆಯನ್ನೂ ನಡೆಸಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ