ಜಿಲ್ಲೆ

ರಕ್ತದಾನದಿಂದ ರೋಗ ನಿಯಂತ್ರಣ ಸಾಧ್ಯ

Mysuru - Desk - Naveen Kumar H P


ಚನ್ನರಾಯಪಟ್ಟಣ : ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ತಿಳಿಸಿದರು.


73ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಪಟ್ಟಣದ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ಶ್ರೀಪ್ರಸನ್ನ ಗಣಪತಿ ಸೇವಾ ಸಮಿತಿ, ವೈದ್ಯ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು, ಯೋಗಗುರು ಚೇತನ್ ಗುರೂಜಿ ವಿದ್ಯಾರ್ಥಿಗಳ ತಂಡ ಹಾಗೂ ಜೀವ ಸಂಜೀವಿನಿ ರಕ್ತನಿಧಿ ಕೇಂದ್ರದಿಂದ ಇತ್ತೀಚೆಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.


ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯೂನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆನೀಡಿದರು.


ಶಿಬಿರದಲ್ಲಿ 50 ಯೂನಿಟ್ ಬ್ಲಡ್ ಸಂಗ್ರಹಿಸಲಾಯಿತು. ಶಿಬಿರದಲ್ಲಿ ಪ್ರಸನ್ನ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎನ್.ಅಶೋಕ್, ಕಾರ್ಯದರ್ಶಿ ಸಿ.ವೈ.ಸತ್ಯನಾರಾಯಣ, ಖಜಾಂಚಿ ಸಿ.ಎಸ್.ಮನೋಹರ್, ಸಹಕಾರ್ಯದರ್ಶಿ ಮಹದೇವ್ ಯೋಗ ಗುರು ಶ್ರೀ ಚೇತನ್ ಗುರೂಜಿ, ವೈದ್ಯ ನಸಿರ್ಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಬಿ.ಎಲ್.ಅರುಣ್ ಕುಮಾರ್, ಜೀವ ಸಂಜೀವಿನಿ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಮೋಹನ್ ಕುಮಾರ್, ಆಪ್ತ ಸಮಾಲೋಚಕ ಕೆಂಚೇಗೌಡ, ವೈದ್ಯ ಶಾಲೆಯ ವಿದ್ಯಾರ್ಥಿಗಳು ಹಾಗೂ ರಕ್ತ ದಾನಿಗಳು ಭಾಗವಹಿಸಿದ್ದರು.