ಕುಂದಾಪುರ: ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ವತಿಯಿಂದ ಗ್ರಾಪಂ ಕೋಟೇಶ್ವರ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಮಂದಾರ್ತಿ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ರೇಬಿಸ್ ಹಾಗೂ ಕಾಲರಾ ರೋಗ ತಡೆಗಟ್ಟುವಿಕೆಯ ಮಾಹಿತಿ ಕಾರ್ಯಾಗಾರ ಕೋಟೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆಯಿತು. ರೋಟರಿ ಮಿಡ್ ಟೌನ್ ಅಧ್ಯಕ್ಷ ಶೇಖರ್ ಎನ್.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮಾ ಶೇಟ್ ಮತ್ತು ಡಾ.ಮನೋಜ್ ಭಟ್ ಮಾಹಿತಿ ನೀಡಿದರು. ಕ್ಲಬ್‌ನ ಕಾರ್ಯದರ್ಶಿ ಉದಯ್ ಶೆಟ್ಟಿ ಆಜ್ರಿ, ಗೌತಮ್ ಹೆಗ್ಡೆ, ಸುನೀಲ್ ಕುಮಾರ್ ಶೆಟ್ಟಿ ಹೇರಿಕುದ್ರು, ದಯಾನಂದ ಶೆಟ್ಟಿ ಕಟ್‌ಕೇರಿ ಉಪಸ್ಥಿತರಿದ್ದರು.