ಕುರುಗೋಡು: ಕೋವಿಡ್ ನಂತರದ ದಿನಗಳಲ್ಲಿ 30 ವರ್ಷದೊಳಗಿನ ಯುವಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದು ವೈದ್ಯಾಧಿಕಾರಿ ಡಾ.ಗುರುಬಸವರಾಜ ಹೇಳಿದರು.
ಮುಷ್ಟಗಟ್ಟೆ ಗ್ರಾಮದಲ್ಲಿ ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಮಂಗಳೂರು, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಸಣಾ ಶಿಬಿರದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದ ಜನರು ಆರೋಗ್ಯಕ್ಕಾಗಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಲೇರಿಯಾ, ಡೆಂೆ, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದರು. ಶಿಬಿರದಲ್ಲಿ ವೈದ್ಯರಾದ ಲಕ್ಷ್ಮಣ ನಾಯಕ್, ದಿವ್ಯಾ, ಪುಷ್ಪಾ, ಪ್ರಮೋದ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಜನರ ತಪಾಸಣೆ ಮಾಡಿ ಔಷಧ ವಿತರಿಸಿದರು.
55 ಜನರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಸಿದರು. 20 ಜನರಿಗೆ ಕನ್ನಡಕ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಬಸವರಾಜ, ಪಿಡಿಒ ದೇವರಾಜ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾದಿ ಗಾದಿಲಿಂಗಪ್ಪ ಇದ್ದರು.