ಧಾರವಾಡ: ಕೇಂದ್ರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೆ.13ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆ ಆಯೋಜಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿಗೆ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.