ಜಿಲ್ಲೆ

ಪಿಎಂ ಜನಮಾನ್​ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ 4.50 ಲಕ್ಷ ರೂ.

ಗೋಪಾಲಕೃಷ್ಣ ಪಾದೂರ್

ಉಡುಪಿ: ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಜನಮನ್​ ಯೋಜನೆಯಲ್ಲಿ ಕೊರಗ ಸಮುದಾಯದ ಮನೆ ನಿರ್ಮಾಣಕ್ಕೆ 4.50 ಲಕ್ಷ ರೂ. ಅನುದಾನ ಲಭ್ಯವಿದ್ದು, ಯಾವುದೇ ಅರ್ಜಿಯನ್ನು ತಿರಸ್ಕರಿಸದೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಶಿವಮೊಗ್ಗ ಸಂಸದ ಬಿ.ವೈ.ರಾವೇಂದ್ರ ಸೂಚನೆ ನೀಡಿದ್ದಾರೆ.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿಯಲ್ಲೂ ಕೊರಗ ಸಮುದಾಯಕ್ಕೆ ಹಕ್ಕುಪತ್ರ ನೀಡಲು ಅವಕಾಶವಿದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಕೊರಗ ಸಮುದಾಯದ ಪ್ರತಿ ಹಾಡಿಗೆ ಒಬ್ಬರಂತೆ ನೋಡಲ್​ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಈಗಾಗಲೇ ರೇಶನ್​ ಕಾರ್ಡ್​, ಆಧಾರ್​ ಕಾರ್ಡ್​, ಆಯುಷ್ಮಾನ್​ ಕಾರ್ಡ್​ ವಿತರಿಸಲಾಗಿದೆ. 10 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ. ಪಕ್ಕಾ ಮನೆ ನಿರ್ಮಾಣ, ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕನಿಷ್ಠ 50 ಮನೆಗಳಿರುವ ಪ್ರದೇಶದಲ್ಲಿ ಬಹುಪಯೋಗಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದು, ಕೇಂದ್ರ ಸರ್ಕಾರ 60 ಲಕ್ಷ ರೂ. ಅನುದಾನ ನೀಡುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 18 ಸಭಾಭವನ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 9ಕ್ಕೆ ಅನುಮೋದನೆ ಲಭಿಸಿದ್ದು, 2 ಕಟ್ಟಡಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ವಿಶ್ವಕರ್ಮ ಯೋಜನೆಗೆ 14 ಕಡೆ ತರಬೇತಿ

ಜಿಲ್ಲಾ ಕೈಗಾರಿಕಾ ಕೇಂದ್ರ ನಿರ್ಧೇಶಕ ನಾಗರಾಜ ನಾಯಕ್​ ಮಾತನಾಡಿ, ಜಿಲ್ಲೆಯಲ್ಲಿ ವಿಶ್ವಕರ್ಮ ಯೋಜನೆಯಲ್ಲಿ 4130 ಅರ್ಜಿಗಳು ಬಂದಿದ್ದು, 2,216 ಮಂದಿ ಲಾನುಭವಿಗಳನ್ನು ಆಯ್ಕೆ ಮಾಡಿ 14 ಕೇಂದ್ರಗಳಲ್ಲಿ ತರಬೇತಿ ನೀಡಲಾಗಿದೆ. 17.5 ಕೋಟಿ ರೂ. ಸಹಾಯಧನ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉಡುಪಿ ಜಿಲ್ಲೆಯು ವಿಶ್ವಕರ್ಮ ಯೋಜನೆಯ ಅರ್ಜಿ ವಿಲೇವಾರಿಯಲ್ಲಿ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಉತ್ತಮ ಪ್ರಗತಿಯಾಗಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳಿಗೂ ಯೋಜನೆ ತಲುಪಬೇಕು ಎಂದು ಸಂಸದ ರಾವೇಂದ್ರ ಹೇಳಿದರು.

ಶಾಸಕ ಗುರ್ಮೆ ಸುರೇಶ್​ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿರುವ ಕೈಗಾರಿಕೆಗಳನ್ನು ಸ್ಥಳಿಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನಾಯಕ್​, ನಿಯಮ ಪ್ರಕಾರ 15 ವರ್ಷಕ್ಕಿಂತ ಹೆಚ್ಚುಕಾಲ ವಾಸವಾಗಿದ್ದರೆ ಅವರನ್ನು ಸ್ಥಳಿಯರೆಂದು ಪರಿಗಣಿಸಲಾಗುತ್ತಿದ್ದು, ಎಲ್ಲಾ ಕೈಗಾರಿಕೆಗಳಲ್ಲಿ ಶೇ.70ರಷ್ಟು ಮಂದಿ ಸ್ಥಳಿಯ ಉದ್ಯೋಗಿಗಳಿದ್ದಾರೆ ಎಂದರು.

ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ರೈತರು ಜಮೀನುಗಳಲ್ಲಿ ಹೆಚ್ಚು ಇಳುವರಿ ಪಡೆಯುವ ಉದ್ದೇಶದಿಂದ ರಸಗೊಬ್ಬರಗಳನ್ನು ಅವೈಜ್ಞಾನಿಕವಾಗಿ ಬಳಕೆ ಮಾಡುತ್ತಾರೆ. ಇದರಿಂದಾಗಿ ಅಲ್ಯೂಮಿನಿಯಂ ಸೇರಿದಂತೆ ಹೆಚ್ಚಿನ ರಾಸಾಯನಿಕಗಳು ನದಿಗಳನ್ನು ಸೇರಿ ಜಲ ಮಾಲಿನ್ಯವನ್ನು ಉಂಟಾಗುತ್ತಿದೆ. ಹೀಗಾಗಿ ಮಣ್ಣಿನ ಆರೋಗ್ಯ ಕಾರ್ಡ್​ ವಿತರಿಸಿ, ಮಣ್ಣಿನ ಪೋಷಕಾಂಶಗಳ ಅನುಗುಣವಾಗಿ ರಾಸಾಯನಿಕ ಗೊಬ್ಬರ ಬಳಕೆ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದರು.

ಕೃಷಿ ಅಧಿಕಾರಿ ಚಂದ್ರಶೇಖರ್​ ನಾಯಕ್​ ಮಾತನಾಡಿ, ಆದಿ ಉಡುಪಿಯಲ್ಲಿ 1 ಮಣ್ಣು ಪರೀಾ ಕೇಂದ್ರವಿದೆ. ವಾರದಲ್ಲಿ ಸರಾಸರಿ 300 ಮಾದರಿಗಳನ್ನು ಪರೀಸಲಾಗುತ್ತಿದೆ. ವರ್ಷಕ್ಕೆ 10 ಸಾವಿರ ಗುರಿ ನಿಗದಿ ಮಾಡಲಾಗಿದ್ದು, ಈಗಾಗಲೇ 7062 ಮಾದರಿಗಳನ್ನು ಪರೀಸಿ ವರದಿ ನೀಡಲಾಗಿದೆ ಎಂದರು.

ಅರಣ್ಯ ಇಲಾಖೆ ಭೂಮಿ ಒದಗಿಸಿ

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸುವ ಬಹು ಗ್ರಾಮ ಕುಡಿಯುವ ನೀರು ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಅರಣ್ಯ ಇಲಾಖೆ ನಿಯಮಾನುಸಾರ ಮಂಜೂರು ಮಾಡಬೇಕು. ಈಗಾಗಲೇ 784 ಕೋಟಿ ರೂ. ವೆಚ್ಚದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಯೋಜನೆ ಜಾರಿಯಾಗಿದೆ. ಕಾರ್ಕಳ ಮತ್ತು ಕಾಪು ತಾಲೂಕಿನಲ್ಲಿ 1600 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳನ್ನು ಶ್ರೀ ಪೂರ್ಣಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1412 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈಗಾಗಲೇ ಕೈಗೊಂಡಿರುವ ಹೆಬ್ರಿ, ಪರ್ಕಳ, ಕರಾವಳಿ ಜಂಕ್ಷನ್​ನಿಂದ ಮಲ್ಪೆ ವರೆಗೆ ಹೆದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಭೂ ಸ್ವಾಧಿನ ಪ್ರಕ್ರಿಯೆಯನ್ನು ಬೇಗ ಮುಗಿಸಿ, ಕಾಮಗಾರಿಯನ್ನು ವೇಗವಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಇಂದ್ರಾಳಿ ಬ್ರಿಡ್ಜ್​ ಮಾರ್ಚ ಅಂತ್ಯಕ್ಕೆ

ಹೆದ್ದಾರಿ ಇಲಾಖೆ ಅಭಿಯಂತರ ಮಂಜುನಾಥ ನಾಯಕ್​ ಮಾತನಾಡಿ, ಇಂದ್ರಾಳಿ ಸೇತುವೆ ಕಾಮಗಾರಿ ಮಾರ್ಚ ಅಂತ್ಯಕ್ಕೆ ಮುಗಿಯಲಿದೆ. 20 ದಿನದಲ್ಲಿ ಕಬ್ಬಿಣದ ಸೇತುವೆ ವೆಲ್ಡಿಂಗ್​ ಕಾರ್ಯ ಪೂರ್ಣವಾಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಅನೇಕ ಬಾರಿ ಗಡವು ವಿಸ್ತರಿಸಲಾಗಿದ್ದು, ೆ.10ರೊಳಗೆ ಕೆಲಸ ಮುಗಿಸದಿದ್ದರೆ ಗುತ್ತಿಗೆದಾರರನ್ನು ಕಪು$್ಪಪಟ್ಟಿಗೆ ಸೇರಿಸಲು ಸಂಬಂಧಪಟ್ಟ ಇಲಾಖೆಗೆ ಶಿಾರಸ್ಸು ಮಾಡುವುದಾಗಿ ತಿಳಿಸಿದರು.

ಶಾಸಕರಾದ ಯಶ್​ಪಾಲ್​ ಸುವರ್ಣ, ಗುರುರಾಜ್​ ಶೆಟ್ಟಿ ಗಂಟಿಹೊಳೆ, ಕಿರಣ್​ ಕುಮಾರ್​ ಕೊಡ್ಗಿ, ಕಿಶೋರ್​ ಕುಮಾರ್​ ಪುತ್ತೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​ ಮತ್ತಿತರರು ಉಪಸ್ಥಿತರಿದ್ದರು.