ಜಿಲ್ಲೆ

ಲಿಂಗಾಪುರದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ

Hassan

ಅರಕಲಗೂಡು: ಕರೊನಾ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಯಿತು.

ಗ್ರಾಮದ ಸೋಂಕಿತ ವ್ಯಕ್ತಿಯೊಂದಿಗೆ ಇಬ್ಬರು ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬಸವಾಪಟ್ಟಣ ಪ್ರಾಥಮಿಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ದ್ರಾವಣ ಸಿಂಪಡಿಸುವ ಮೂಲಕ ಸ್ವಚ್ಚತೆಗೆ ಒತ್ತು ನೀಡಲಾಯಿತು.

ಸಾರ್ವಜನಿಕ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಂಡು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಜೇಶ್ ಬಾರ್ದಿಲ ಮನವಿ ಮಾಡಿದರು.

ಆರೋಗ್ಯ ನಿರೀಕ್ಷಕ ಲೋಕೇಶ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸವಿತಾ, ಆಶಾ ಕಾರ್ಯಕರ್ತೆ ಸಾವಿತ್ರಿ, ಗ್ರಾಪಂ ಸದಸ್ಯ ಚಂದ್ರೇಗೌಡ, ಪಿಡಿಒ ರಮೇಶ್, ಕಾರ್ಯದರ್ಶಿ ಯೊಗೇಶ್ ಹಾಜರಿದ್ದರು.