ಜಿಲ್ಲೆ

ಮಾನಸಿಕ ಆರೋಗ್ಯ ತಪ್ಪು ಕಲ್ಪನೆ ನಿವಾರಣೆ

Avinash R

ಬೆಳ್ತಂಗಡಿ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಯೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೇಂಟ್ ಆ್ಯಗ್ನೆಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಾ ಗೋಪಕುಮಾರ್ ಹೇಳಿದರು.

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ ಪೀಸ್ ವಿದ್ಯಾರ್ಥಿ ಸಂಘ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ವಿಭಾಗ ಮುಖ್ಯಸ್ಥೆ ಡಾ.ವಂದನಾ ಜೈನ್, ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ.ಮಹೇಶ್‌ಬಾಬು, ಅಶ್ವಿನಿ ಎಚ್, ಸಿಂಧು ವಿ, ಸಂಘದ ಅಧ್ಯಕ್ಷೆ ಅಲಿಷ ಪಿ.ಜಾಯ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಚೈತನ್ಯಾ ಸ್ವಾಗತಿಸಿದರು. ಕೀರ್ತನಾ ವಂದಿಸಿದರು. ಸ್ಟಿನ್ಸಿ ಕಾರ್ಯಕ್ರಮ ನಿರೂಪಿಸಿದರು.