ಜಿಲ್ಲೆ

ಗೌರಿ-ಗಣೇಶ ಮೂರ್ತಿ ವಿಸರ್ಜನೆ

Mysuru - Desk - Yashavanth Kumar N

ಶನಿವಾರಸಂತೆ: ಸಮೀಪದ ಮಾಲಂಬಿ-ಕೂಡುರಸ್ತೆ ಗ್ರಾಮದಲ್ಲಿ ಗೌರಿ-ಗಣೇಶ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿಯನ್ನು ಗುರುವಾರ ಅದ್ದೂರಿ ಮೆರವಣಿಗೆ ಮಾಡಿ ವಿಸರ್ಜಿಸಲಾಯಿತು.

ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ ವಿಧಿ-ವಿಧಾನ ನೆರವೇರಿಸಲಾಯಿತು. ಬಳಿಕ ಗೌರಿ-ಗಣೇಶ ಮೂರ್ತಿಯನ್ನು ಅಲಂಕೃತ ವಾಹನದಲ್ಲಿರಿಸಿ ವಾದ್ಯಗೋಷ್ಠಿಯೊಂದಿಗೆ ಗ್ರಾಮದಿಂದ ಆಲೂರು-ಸಿದ್ದಾಪುರದವರೆಗೆ ಮೆರವಣಿಗೆ ಮಾಡಲಾಯಿತು. ಮತ್ತೆ ಅಲ್ಲಿಂದ ವಾಪಸ್ ಬಂದು ಮಾಲಂಬಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ರಾತ್ರಿ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು. ಗ್ರಾಮದ ನೂರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.