ಶನಿವಾರಸಂತೆ: ವಿವಿಧ ಸೇವಾ ಸಮಿತಿಗಳಿಂದ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿಗಳನ್ನು ಸೋಮವಾರ ಅದ್ದೂರಿಯಾಗಿ ಮೆರವಣಿಗೆ ಮಾಡಿ ವಿಸರ್ಜಿಸಲಾಯಿತು.
ಸಮೀಪದ ಕಣಿವೆಬಸವನಹಳ್ಳಿಯಲ್ಲಿ ಗೌರಿ-ಗಣೇಶ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು.
ಮುಳ್ಳೂರು ಗ್ರಾಮದ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಹೋಮ-ಹವನ, ಪೂಜಾ ಕೈಂಕರ್ಯ ನೆರವೇರಿದವು. ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಇಂಟಿನಾಯಕನ ಕೆರೆಯಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಮಾಲಂಬಿ ಗ್ರಾಮದ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿ ಯನ್ನು ಬಾಲಕೆರೆಯಲ್ಲಿ ವಿಸರ್ಜಿಸಲಾಯಿತು.