ಕೊಪ್ಪಳದಲ್ಲಿ ಡಿಸಿ ನಲಿನ್​ ಅತುಲ್​ ಅಧ್ಯಕ್ಷತೆಯಲ್ಲಿ ಗುರುವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಹಿರಿಯ ಸಿವಿಲ್​ ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್​, ಹೆಚ್ಚುವರಿ ಎಸ್​ಪಿ ಹೇಮಂತ ಕುಮಾರ್​ ಎನ್​., ಡಿಎಚ್​ಒ ಡಾ.ಟಿ.ಲಿಂಗರಾಜು, ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್​. ಇದ್ದರು. 
ಜಿಲ್ಲೆ

ಮಕ್ಕಳು ಲಸಿಕೆಯಿಂದ ವಂಚಿತರಾಗದಿರಲಿ, ಡಿಸಿ ನಲಿನ್​ ಅತುಲ್​ ಸೂಚನೆ

ಕೊಪ್ಪಳ: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನಿಗದಿತ ಅವಧಿಯಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಿ. ಯಾವೊಂದು ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮಗು ಹುಟ್ಟಿನಿಂದ 16 ವರ್ಷದವರೆಗೆ ನಿಗದಿತ ಅವಧಿಯಲ್ಲಿ ಲಸಿಕೆ ನೀಡಿ. ಪೊಲೀಯೋ, ದಡಾರ, ರುಬೆಲ್ಲಾ ಮಾರಕ ಕಾಯಿಲೆಯಿಂದ ಲಸಿಕೆ ಮಕ್ಕಳನ್ನು ರಸಲಿದೆ. ಲಸಿಕೆ ಬಗ್ಗೆ ಪಾಲಕರಿಗೆ ತಿಳಿವಳಿಕೆ ನೀಡಿ. ಲಸಿಕೆ ಪಡೆಯದ ಮಕ್ಕಳ ಮಾಹಿತಿ ಸಂಗ್ರಹಿಸಿ. ತಪ್ಪಿಸಿಕೊಳ್ಳದಂತೆ ನಿಗಾವಹಿಸಿ. ಶಾಲೆಗೆ ಮಕ್ಕಳನ್ನು ದಾಖಲಿಸಿಕೊಳ್ಳುವಾಗ ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಿ. ಯಾವೊಂದು ಮಗು ಯಾವುದೇ ಲಸಿಕೆಯಿಂದ ವಂಚಿತವಾಗದಂತೆ ಎಚ್ಚರವಹಿಸಿ. ತಾಯಿ&ಮಗು ಮರಣ ತಪ್ಪಿಸಲು ಕ್ರಮವಹಿಸಿ. ಗರ್ಭಿಣಿಯರಿಗೆ ಕಾಲ ಕಾಲಕ್ಕೆ ಪರೀೆ, ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ತಿಳಿವಳಿಕೆ ನೀಡಿ. ತಾಯಿ ಕಾರ್ಡ್​ನಲ್ಲಿ ಎಲ್ಲ ವಿವರ ನಮೂದಿಸಿ ಎಂದು ತಾಕೀತು ಮಾಡಿದರು.

ಡಿಎಚ್​ಒ ಡಾ.ಟಿ.ಲಿಂಗರಾಜು ಮಾತನಾಡಿ, ರಕ್ತದೊತ್ತಡ, ರಕ್ತ ಹೀನತೆಯಿಂದ ಹೆರಿಗೆ ವೇಳೆ ಮೃತಪಡುವ ಪ್ರಕರಣಗಳು ವರದಿಯಾಗಿವೆ. ಹೊರ ಜಿಲ್ಲೆಯ ಪ್ರಕರಣಗಳೇ ಅಧಿಕವಾಗಿವೆ. ಪರಿಸ್ಥಿತಿ ಕೈ ಮೀರಿದ ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗುತ್ತಿದೆ. ವೈದ್ಯರ ಸಲಹೆ ಮೀರಿ ಮನೆಗೆ ಕರೆದೊಯ್ಯುತ್ತಾರೆ. ಸೋಂಕು ತಗಲು ಮಗು ಮೃತಪಡುವ ಸಾಧ್ಯತೆ ಇರುತ್ತದೆ. ಪ್ರಸೂತಿ ತಜ್ಞರು ತಮ್ಮ ಹಂತದಲ್ಲಿ ನಿರ್ವಹಣೆ ಆಗದ ಪ್ರಕರಣಗಳನ್ನು ಜಿಲ್ಲಾಸ್ಪತ್ರೆಗೆ ಶಿಾರಸ್ಸು ಮಾಡುವಂತೆ ಸೂಚಿಸಿದ್ದೇವೆ ಎಂದು ವಿವರಿಸಿದರು.

ಜಿಲ್ಲಾ ಕ್ಷಯರೋಗ ನಿಮೂರ್ಲನಾಧಿಕಾರಿ ಡಾ.ಶಶಿಧರ ಮಾತನಾಡಿ, ಜಿಲ್ಲೆಯ 9 ಗ್ರಾಪಂಗಳನ್ನು ಕ್ಷಯಮುಕ್ತವೆಂದು ಘೋಷಿಸಲಾಗಿದೆ. ಪ್ರಸಕ್ತ ವರ್ಷ 11 ಗ್ರಾಪಂ ಆಯ್ಕೆ ಮಾಡಿ ಪರೀೆ ಹೆಚ್ಚಿಸಲಾಗಿದೆ. ಅಗತ್ಯ ಅರಿವು ಮೂಡಿಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ, ಹಾಸ್ಯ ಕಲಾವಿದ ಪ್ರಾಣೇಶ ಅವರನ್ನು ರಾಯಭಾರಿಗಳನ್ನಾಗಿ ಮಾಡಲಾಗಿದೆ. ಪ್ರತಿ ತಿಂಗಳ 24ನೇ ತಾರೀಖಿನಂದು ನಿಕ್ಷಯ ದಿವಸ, ಪ್ರತಿ ಗುರುವಾರ ಕ್ಷಯ ನಿಮೂರ್ಲನಾ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಂದಕುಮಾರ ಮಾತನಾಡಿ, ಜಿಲ್ಲೆಯಲ್ಲಿ 18,629 ಶಾಲಾ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪ್ಪರಿಣಾ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಜಾಥಾ, ಬೀದಿ ನಾಟಕ, ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಸಿ ಮಾತನಾಡಿ, ಜಿಲ್ಲೆಯಲ್ಲಿ ನಾಯಿ ಕಡಿತದಿಂದ ತೊಂದರೆಗೊಳಗಾದವರಿಗೆ ಚಿಕಿತ್ಸಾ ಮೊತ್ತ ನೀಡಿ. ನಾಯಿ ಕಡಿತದಿಂದ ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಈ ಬಗ್ಗೆ ಎಲ್ಲ ನಗರ, ಸ್ಥಳಿಯ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಡಿಯುಡಿಸಿ ಪಿಡಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಹಿರಿಯ ಸಿವಿಲ್​ ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್​, ಹೆಚ್ಚುವರಿ ಎಸ್​ಪಿ ಹೇಮಂತ ಕುಮಾರ್​ ಎನ್​., ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್​. ಇತರರಿದ್ದರು.