ಜಿಲ್ಲೆ

ಯತ್ನಾಳ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ವಿರುದ್ಧ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.3ರಂದು ಗವಿನಾಯಕ ಕೊಲೆಯಾಗಿದೆ. ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದದ ಪಾಟೀಲ್​, ಹಿಂದುಗಳನ್ನು ಕೊಲ್ಲುವ ಮುಸ್ಲಿಮರಿಗೆ ಉತ್ತರ ನೀಡಬೇಕು. ಮುಸ್ಲಿಂ ಯುವತಿಯರನ್ನು ಮದುವೆ ಆಗುವ ಹಿಂದು ಯುವಕರಿಗೆ 5 ಲಕ್ಷ ರೂ. ಪ್ರೋತ್ಸಾಹಧನ ನೀಡುವುದಾಗಿ ಹೇಳಿದ್ದರು. ಇಂಥ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯಲಿದೆ. ಮುಸ್ಲಿಂ ಮಹಿಳೆಯರನ್ನು ಕೆಟ್ಟ ಮನಸ್ಥಿತಿಯಿಂದ ನೋಡಿದ್ದು, ಅವಮಾನ ಮಾಡಿದ್ದಾರೆಂದು ದೂರು ನೀಡಿದ್ದಾರೆ. ದೂರು ಆಧರಿಸಿ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಅಬ್ದುಲ್​ ರಜಾಕ್​ಖಾನ್​ ಎಂಬುವವರು ಯತ್ನಾಳ ವಿರುದ್ಧ ದೂರು ನೀಡಿದ್ದಾರೆ. ಬಸನಗೌಡ ಮಾತಿನಿಂದ ರಾಜ್ಯದಲ್ಲಿ ಸಾಮರಸ್ಯ ಹಾಳಾಗಲಿದೆ. ಸಂವಿಧಾನ ಮೌಲ್ಯಗಳಿಗೆ ಧಕ್ಕೆಯಾಗಲಿದೆ ಎಂದು ಉಲ್ಲೇಖಿಸಿದ್ದಾರೆ. ಈಗಾಗಲೇ ಯತ್ನಾಳ ವಿರುದ್ಧ ಪ್ರಕರಣ ದಾಖಲಿಸಿದ್ದು ಎಲ್ಲ ದೂರುಗಳನ್ನು ಅದರಡಿ ಪರಿಗಣಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.