ಗಂಗೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿ ಸಂಘದವರು ವಿದ್ಯಾರ್ಥಿಗಳಿಗೆ ಕೊಡಮಾಡಿದ ಗುರುತು ಚೀಟಿ ವಿತರಿಸಲಾಯಿತು 
ಜಿಲ್ಲೆ

ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಕಾರ್ಯ

ಇಂದಿರಾ ಎನ್ ಕೆ

ಗಂಗೊಳ್ಳಿ: ಸರ್ಕಾರಿ ಶಾಲೆ ಕೀಳರಿಮೆ ತೊರೆದು ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು ಎಂದು ಪತ್ರಕರ್ತ ಬಿ.ರಾಘವೇಂದ್ರ ಪೈ ಹೇಳಿದರು. ಗಂಗೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ಮೇಲ್ ಗಂಗೊಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಹಳೇ ವಿದ್ಯಾರ್ಥಿ ಸಂಘದವರು ವಿದ್ಯಾರ್ಥಿಗಳಿಗೆ ಕೊಡ ಮಾಡಿದ ಗುರುತು ಚೀಟಿಯನ್ನು ಗುರುವಾರ ವಿತರಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ನಾಗೇಶ, ಕಾರ್ಯದರ್ಶಿ ನಾಗಲಕ್ಷ್ಮೀ, ಡಾ.ಬಿ.ಆರ್.ಅಂಬೇಡ್ಕರ ಯುವಕ ಮಂಡಲ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ., ಎಸ್‌ಡಿಎಂಸಿ ಉಪಾಧ್ಯಕ್ಷೆ ತುಳಸಿ, ವಕೀಲ ಆನಂದ ಜಿ., ಅಂಗನವಾಡಿ ಕಾರ್ಯಕರ್ತೆ ಸಹನಾ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ ಸ್ವಾಗತಿಸಿದರು. ಸಹಶಿಕ್ಷಕ ಯೋಗೇಶ್ ಕಾರ್ಯಕ್ರಮ ನಿರ್ವಹಿಸಿದರು.