ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಬಳ್ಳಾರಿಯಲ್ಲಿ ಪ್ರಶಸ್ತಿಪತ್ರ ವಿತರಿಸಲಾಯಿತು. ಎಸಿ ಟಿ.ಪ್ರಮೋದ, ಚುನಾವಣಾ ಸಾಕ್ಷರತಾ ಸಂಚಾಲಕಿ ಟಿ.ಎಂ.ಆರ್.ರಾಜ್ಮಾ, ಉಪನ್ಯಾಸಕರಾದ ಭವಾನಿ, ಆನಂದ್ ಇತರರಿದ್ದರು. 
ಜಿಲ್ಲೆ

ವಿಜೇತರಿಗೆ ಪ್ರಶಸ್ತಿಪತ್ರ ವಿತರಣೆ

ಗಾಯತ್ರಿ ಮಾಲಿಪಾಟೀಲ್

ಕಂಪ್ಲಿ: ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಗಳ ವಿಜೇತರಿಗೆ ಬಳ್ಳಾರಿಯ ಜಿಲ್ಲಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾನ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿಪತ್ರ ವಿತರಿಸಲಾಯಿತು.

ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಾದ ಎನ್.ಕವಿತಾ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಉಪ್ಪಾರ್ ಪಲ್ಲವಿ ದ್ವಿತೀಯ, ಯು.ಭಾರತಿ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಅಪ್ಪು ತೃತೀಯ, ಪುನೀತ್ ಚಿತ್ರಕಲೆಯಲ್ಲಿ ದ್ವಿತೀಯ, ಟಿ.ಚಂದನ, ಪಂಪಾಪತಿ, ನಂದೀಶ, ಅಜಯ, ಅಹಮ್ಮದ್‌ಬಾಷಾ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿದ್ದಾರೆ. ವಿಜೇತರಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಪ್ರಶಸ್ತಿಪತ್ರ ವಿತರಿಸಿದರು.