ಸಿದ್ದಾಪುರ: ಗೋಣಿಕೊಪ್ಪಲಿನ ಲಿಯೋರ ಗೋಲ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಾಲ್ದಾರೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸಲಾಯಿತು.
ಸಂಸ್ಥೆಯ ರೋಬಿನ್ ಪೀಟರ್ ಮಾತನಾಡಿ, ಲಿಯೋರ ಸಂಸ್ಥೆಯು ಎರಡು ವರ್ಷದಿಂದ ಹಲವು ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಈ ವರ್ಷ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ 500 ಬ್ಯಾಗ್‌ಗಳನ್ನು ವಿತರಣೆ ಮಾಡಿದೆ. ಮಕ್ಕಳು ಇದರ ಸದುಪಯೋಗ ಪಡೆದು ಶಿಕ್ಷಣ ರಂಗದಲ್ಲಿ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಈ ಸೇವಾ ಚಟುವಟಿಕೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಶ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವಿಜಯಕುಮಾರ್ ಇತರರು ಹಾಜರಿದ್ದರು.