ಕೆ.ಆರ್.ಸಾಗರ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆ ಶಾಲೆಗಳ ಮಕ್ಕಳಿಗೆ ಎ.ಎಸ್.ಬಂಡಿಸಿದ್ದೇಗೌಡ ಪ್ರತಿಷ್ಠಾನದ ವತಿಯಿಂದ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ ಮಾಡಲಾಯಿತು. 
ಜಿಲ್ಲೆ

ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ

ಕೆ.ಆರ್.ಸಾಗರ: ಕೆ.ಆರ್.ಸಾಗರ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆ ಶಾಲೆಗಳ ಮಕ್ಕಳಿಗೆ ಎ.ಎಸ್.ಬಂಡಿಸಿದ್ದೇಗೌಡ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ ಮಾಡಲಾಯಿತು.

ಕೆ.ಆರ್.ಸಾಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಕ್ಕಳಿಗೆ ಸಿಹಿ ತಿನ್ನಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರಿ ಶಾಲಾ ಮಕ್ಕಳು ಕೂಡ ಯಾವುದೇ ಕೊರತೆ ಉಂಟಾಗದಂತೆ ಉತ್ತಮ ವಿದ್ಯಾಭ್ಯಾಸ ಮಾಡಬೇಕು ಎನ್ನುವ ಉದ್ದೇಶದಿಂದ ನಮ್ಮ ಪ್ರತಿಷ್ಠಾನದ ವತಿಯಿಂದ ಉಚಿತವಾಗಿ ಬ್ಯಾಗ್ ಮತ್ತು ನೋಟ್ ಬುಕ್ ನೀಡಲಾಗುತ್ತಿದೆ ಎಂದರು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಕೆ.ಆರ್.ಸಾಗರ ಗ್ರಾಪಂ ಅಧ್ಯಕ್ಷೆ ಜಯಂತಿ ಕಾಳಪ್ಪ, ಸದಸ್ಯರಾದ ಸ್ನೇಕ್ ದೀಪು, ದೇವರಾಜು, ಕಾ.ನೀ.ನಿಗಮದ ಕಾರ್ಯಪಾಲಕ ಅಭಿಯಂತರ ಜಯಂತ್, ಮುಖಂಡರಾದ ಎಂ.ಬಿ.ಕುಮಾರ್, ಜಗದೀಶ್, ಸಂಜು, ನಾಗರಾಜು ಇದ್ದರು.